Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:19 - ಕನ್ನಡ ಸತ್ಯವೇದವು C.L. Bible (BSI)

19 ಅದೇ ಯಾಜಕನು ಅವಳಿಂದ ಶಪಥಪೂರ್ವಕ ಪ್ರಮಾಣ ಮಾಡಿಸುತ್ತಾ ಅವಳಿಗೆ - “ನೀನು ನಿನ್ನ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ, ಪರಪುರುಷನನ್ನು ಕೂಡದೆ, ಅಶುದ್ಧಳಾಗದೆ ಇರುವವಳಾದರೆ ಶಾಪ ತರುವ ಈ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾಜಕನೂ ಅವಳಿಂದ ಪ್ರಮಾಣಮಾಡಿಸಿ ಹೀಗೆ ಹೇಳಬೇಕು, “ಒಬ್ಬ ಪರಪುರುಷನ ಸಂಗಮಮಾಡದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೇ ನಿರಪರಾಧಿಯಾಗಿದ್ದರೆ ಶಪಿಸಲ್ಪಟ್ಟ ವಿಷಕರವಾದ ಈ ನೀರು ನಿನಗೆ ಯಾವ ಹಾನಿಯನ್ನು ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾಜಕನು ಅವಳಿಂದ ಶಪಥಪೂರ್ವಕವಾದ ಪ್ರಮಾಣವಾಕ್ಯವನ್ನು ನುಡಿಸುವವನಾಗಿ ಹೀಗನ್ನಬೇಕು - ನೀನು ಪರಪುರುಷನ ಸಂಗಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ ದುಷ್ಕಾರ್ಯವನ್ನು ಮಾಡದೆ ಇರುವವಳಾದರೆ ಶಾಪವನ್ನುಂಟು ಮಾಡುವ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಬಳಿಕ ಯಾಜಕನು ಸ್ತ್ರೀಗೆ ಸುಳ್ಳಾಡದೆ ಸತ್ಯವನ್ನೇ ಹೇಳಬೇಕೆಂದು ಪ್ರಮಾಣ ಮಾಡಿಸುವನು. ಯಾಜಕನು ಅವಳಿಗೆ ಹೀಗೆನ್ನಬೇಕು: ‘ನೀನು ಪರಪುರುಷನ ಸಂಗ ಮಾಡದೆ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ ದುಷ್ಕೃತ್ಯವನ್ನು ಮಾಡದೆ ಇರುವವಳಾದರೆ, ಶಾಪವನ್ನು ಉಂಟುಮಾಡುವ ಕಹಿನೀರಿನಿಂದ ನಿನಗೆ ಹಾನಿಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾಜಕನು ಅವಳನ್ನು ಪ್ರಮಾಣ ಮಾಡಿಸಿ, ಸ್ತ್ರೀಗೆ ಹೇಳಬೇಕಾದದ್ದು, “ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುವಾಗ, ಒಬ್ಬ ಪರಪುರುಷನು ನಿನ್ನ ಸಂಗಡ ಮಲಗಿರದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೆ ಇದ್ದರೆ, ಶಾಪವನ್ನು ಉಂಟುಮಾಡುವ ಈ ನೀರು ನಿನಗೆ ಯಾವ ಹಾನಿಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:19
5 ತಿಳಿವುಗಳ ಹೋಲಿಕೆ  

ಉದಾಹರಣೆಗೆ, ಪತಿಯು ಬದುಕಿರುವವರೆಗೆ ಸತಿ ಅವನಿಗೆ ಶಾಸನಾನುಸಾರವಾಗಿ ಬದ್ಧಳು. ಒಂದು ವೇಳೆ, ಆಕೆಯ ಪತಿ ಸತ್ತುಹೋದರೆ, ಆಕೆ ವಿವಾಹಬಂಧನದಿಂದ ಬಿಡುಗಡೆ ಹೊಂದುತ್ತಾಳೆ.


ಒಬ್ಬನ ಹೆಂಡತಿ ತಪ್ಪುದಾರಿ ಹಿಡಿದು, ತನ್ನ ಗಂಡನಿಗೆ ಅಪ್ರಾಮಾಣಿಕಳಾಗಿ ನಡೆದು ಸಿಕ್ಕಿಕೊಳ್ಳದೆ, ಸಾಕ್ಷಿಯಿಲ್ಲದೆ


ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ಯಾಜಕನು ಆಕೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಕೂದಲನ್ನು ಕೆದರಿಸಿ, ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿಡಬೇಕು; ಶಾಪವನ್ನು ತರುವ ವಿಷಕರವಾದ ನೀರನ್ನು ತನ್ನ ಕೈಯಲ್ಲೇ ಹಿಡಿದುಕೊಳ್ಳಬೇಕು.


ಆದರೆ ಆಕೆ ದುಷ್ಟಳಾಗಿರದೆ, ನಿರಪರಾಧಿಯಾಗಿದ್ದ ಪಕ್ಷಕ್ಕೆ ಅವಳಿಗೆ ಯಾವ ಹಾನಿಯೂ ಸಂಭವಿಸದೆ ಗರ್ಭವತಿಯಾಗುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು