Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:2 - ಕನ್ನಡ ಸತ್ಯವೇದವು C.L. Bible (BSI)

2 “ಕುಷ್ಠರೋಗಿಗಳಂಥ ಎಲ್ಲ ಅಂಟುರೋಗಿಗಳನ್ನು ಮೇಹಸ್ರಾವವುಳ್ಳವರನ್ನು ಹಾಗೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲ್ಲಾ ಕುಷ್ಠರೋಗಿಗಳನ್ನೂ ಮೇಹಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಭಯಂಕರವಾದ ಚರ್ಮರೋಗವುಳ್ಳವರನ್ನೂ ದೈಹಿಕಸ್ರಾವವುಳ್ಳವರನ್ನೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನೂ ಪಾಳೆಯದಿಂದ ಹೊರಗಿಡಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಚರ್ಮರೋಗವಿರುವವರೆಲ್ಲರನ್ನು, ಮೇಹಸ್ರಾವವುಳ್ಳವರೆಲ್ಲರನ್ನು ಮತ್ತು ಹೆಣದ ಸೋಂಕಿನಿಂದ ಅಶುದ್ಧರಾದವರೆಲ್ಲರನ್ನು ಪಾಳೆಯದೊಳಗಿಂದ ಹೊರಗೆ ಕಳುಹಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:2
15 ತಿಳಿವುಗಳ ಹೋಲಿಕೆ  

ಆರೋನನ ಮಕ್ಕಳಾದ ಯಾಜಕರಿಗೆ ಈ ಕೆಳಕಂಡಂತೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ತಿಳಿಸಿದರು.


ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸ ಪಾಳೆಯದ ಹೊರಗೆ ಇರಬೇಕು.


ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು.


ನಿಮ್ಮಲ್ಲಿ ಮನುಷ್ಯಪ್ರಾಣ ತೆಗೆದವರು ಹಾಗು ಶವ ಸೋಂಕಿದವರು ಏಳು ದಿನದವರೆಗೆ ಪಾಳೆಯದ ಹೊರಗಡೆ ಇರಬೇಕು. ಮೂರನೆಯ ಮತ್ತು ಏಳನೆಯ ದಿನ ನಿಮ್ಮನ್ನೂ ಸೆರೆಯಾಳುಗಳನ್ನೂ ಶುದ್ಧೀಕರಿಸಿಕೊಳ್ಳಬೇಕು.


ಊರುಬಾಗಿಲಿನ ಹತ್ತಿರ ನಾಲ್ಕುಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೇ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೇ?


ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಆ ವ್ಯಕ್ತಿಯನ್ನು ಅಶುದ್ಧನೆಂದು ನಿರ್ಣಯಿಸಬೇಕು.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.


ಯಾವನಾದರು ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


ಸರ್ವೇಶ್ವರ ಸ್ವಾಮಿ, ಮೋಶೆಗೆ ಹೀಗೆಂದರು:


ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ‘ನಾನು ಅಶುದ್ದನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು