ಅರಣ್ಯಕಾಂಡ 5:22 - ಕನ್ನಡ ಸತ್ಯವೇದವು C.L. Bible (BSI)22 ಶಾಪತರುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ,” ಎಂದು ಹೇಳಬೇಕು. ಅದಕ್ಕೆ ಆ ಹೆಂಗಸು, “ಆಗಲಿ, ಹಾಗೆಯೇ ಆಗಲಿ,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆಯು ಉಬ್ಬುವಂತೆ ನಿನ್ನ ತೊಡೆಗಳು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿ ಹೋಗುವಂತೆ ಮಾಡುವುದು.” ಅದಕ್ಕೆ ಆ ಸ್ತ್ರೀಯು, “ನಾನು ಅಪರಾಧಿಯಾಗಿದ್ದರೆ ಹಾಗೆಯೇ ಆಗಲಿ” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಶಾಪವನ್ನುಂಟುಮಾಡುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆಯೂ ತೊಡೆಗಳು ಕ್ಷೀಣವಾಗಿ ಹೋಗುವಂತೆಯೂ ಮಾಡುವದು ಎಂದು ಹೇಳಬೇಕು. ಅದಕ್ಕೆ ಆ ಸ್ತ್ರೀಯು - ಆಮೆನ್, ಹಾಗೆಯೇ ಆಗಲಿ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯಾಜಕನು, ‘ಹಾನಿಯನ್ನು ಉಂಟುಮಾಡುವ ಈ ನೀರನ್ನು ನೀನು ಕುಡಿಯಬೇಕು. ನೀನು ಪಾಪ ಮಾಡಿದ್ದರೆ ನಿನಗೆ ಮಕ್ಕಳಾಗುವುದಿಲ್ಲ ಮತ್ತು ನೀನು ಪಡೆಯುವ ಮಗು ಹುಟ್ಟುವ ಮೊದಲೇ ಸಾಯುವುದು’ ಎಂದು ಹೇಳಬೇಕು. ಅದಕ್ಕೆ ಸ್ತ್ರೀಯು, ‘ಹಾಗೆಯೇ ಆಗಲಿ’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಶಪಿಸುವಂಥ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ತೊಡೆಯನ್ನು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ ಎಂದು ಹೇಳಬೇಕು, ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣ ಮಾಡಿಸಬೇಕು.” “ ‘ಅದಕ್ಕೆ ಆ ಸ್ತ್ರೀಯು, “ಆಮೆನ್, ಆಮೆನ್,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |