ಅರಣ್ಯಕಾಂಡ 5:25 - ಕನ್ನಡ ಸತ್ಯವೇದವು C.L. Bible (BSI)25 ಆಮೇಲೆ ವ್ಯಭಿಚಾರ ಸಂಶಯ ಸೂಚಕವಾದ ಆ ಹಿಟ್ಟನ್ನು ಅವಳ ಕೈಯಿಂದ ತೆಗೆದುಕೊಂಡ ಯಾಜಕನು ಬಲಿಪೀಠದ ಹತ್ತಿರಕ್ಕೆ ಬರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ವ್ಯಭಿಚಾರದ ಸಂಶಯ ಸೂಚಕವಾದ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವನ ಸಮ್ಮುಖದಲ್ಲಿ ನೈವೇದ್ಯಮಾಡಿ ಯಜ್ಞವೇದಿಯ ಹತ್ತಿರ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಯಾಜಕನು ಸ್ತ್ರೀಯ ಕೈಯಿಂದ ವ್ಯಭಿಚಾರ ಸಂಶಯ ವಿಷಯವಾದ ಆ ಹಿಟ್ಟನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿ ಯಜ್ಞವೇದಿಯ ಹತ್ತಿರ ತರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಯಾಜಕನು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯನ್ನು ಆಕೆಯ ಕೈಗಳಿಂದ ತೆಗೆದುಕೊಂಡು ಅದನ್ನು ಯೆಹೋವನ ಮುಂದೆ ಪ್ರತಿಷ್ಠಿಸಿ, ಬಳಿಕ ಅದನ್ನು ವೇದಿಕೆಯ ಮೇಲೆ ಅರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ಸಂಶಯ ಸೂಚಕ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನೈವೇದ್ಯ ಮಾಡಿ, ಬಲಿಪೀಠದ ಸಮೀಪಕ್ಕೆ ತರಬೇಕು. ಅಧ್ಯಾಯವನ್ನು ನೋಡಿ |
ಈ ಎರಡು ಸಂದರ್ಭಗಳಲ್ಲೂ ಆ ಗಂಡನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ, ಅವನು ಯಾಜಕನಿಗೆ ಮೂರು ಸೇರು ಜವೆಗೋದಿ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಪಾಪವನ್ನು ಹೊರಪಡಿಸುವುದಕ್ಕೂ, ಸರ್ವೇಶ್ವರನಿಗೆ ನೈವೇದ್ಯವಾದ ಕಾಣಿಕೆ. ಆದ್ದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹುಯ್ಯಬಾರದು, ಸಾಂಬ್ರಾಣಿಯನ್ನು ಹಾಕಬಾರದು.