“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.