Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:6 - ಕನ್ನಡ ಸತ್ಯವೇದವು C.L. Bible (BSI)

6 ಯಾವ ಗಂಡಸೇ ಆಗಲಿ ಹೆಂಗಸೇ ಆಗಲಿ, ಮತ್ತೊಬ್ಬನನ್ನು ಮೋಸಗೊಳಿಸಿ ಸರ್ವೇಶ್ವರನಲ್ಲಿ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದರೆ, ಅಂಥವರು ಅಪರಾಧಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವದರಿಂದ ಯೆಹೋವನಿಗೆ ದ್ರೋಹಮಾಡಿ ಅಪರಾಧಿಗಳಾದರೆ ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಇದನ್ನು ಇಸ್ರೇಲರಿಗೆ ತಿಳಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ಮತ್ತೊಬ್ಬನನ್ನು ಆಸ್ತಿಯ ವಿಷಯದಲ್ಲಿ ಮೋಸಗೊಳಿಸಿದರೆ ಅವನು ಸುಳ್ಳುಪ್ರಮಾಣ ಮಾಡುವುದರ ಮೂಲಕ ಯೆಹೋವನಿಗೆ ವಿರೋಧವಾಗಿ ಹೊಲಸಾದ ಕಾರ್ಯವನ್ನು ಮಾಡಿದಂತಾಯಿತು. ಆದ್ದರಿಂದ ಅವನು ದೋಷಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಇಸ್ರಾಯೇಲರಿಗೆ ಹೀಗೆ ಹೇಳು: ‘ಪುರುಷನಾದರೂ ಸ್ತ್ರೀಯಾದರೂ ಮತ್ತೊಬ್ಬರಿಗೆ ಮೋಸಮಾಡಿ ಯೆಹೋವ ದೇವರಿಗೆ ಅಪನಂಬಿಗಸ್ತರಾದರೆ, ಆ ವ್ಯಕ್ತಿ ಅಪರಾಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:6
7 ತಿಳಿವುಗಳ ಹೋಲಿಕೆ  

ಮೋಶೆಗೆ ಸರ್ವೇಶ್ವರ ಹೀಗೆಂದರು:


“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.


ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಇಸ್ರಯೇಲರಿಗೆ ಇಂತೆಂದು ಆಜ್ಞಾಪಿಸು.


ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು


ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು