Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:7 - ಕನ್ನಡ ಸತ್ಯವೇದವು C.L. Bible (BSI)

7 ಅವರು ತಮ್ಮ ಅಪರಾಧವನ್ನು ಒಪ್ಪಿಕೊಳ್ಳಬೇಕು. ಅಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದ್ದರಿಂದ ಅಂಥವನು ತನ್ನ ಪಾಪವನ್ನು ಅರಿಕೆಮಾಡಬೇಕು. ಅದಲ್ಲದೆ, ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ಮಾಡಿದ ಪಾಪವನ್ನು ಅರಿಕೆ ಮಾಡಬೇಕು. ಅವನ ಅಪರಾಧದ ಬದಲುಕೊಟ್ಟು, ಅದರ ಸಂಗಡ ಅದರ ಐದನೆಯ ಪಾಲನ್ನು ಕೂಡಿಸಿ, ಯಾರಿಗೆ ಅಪರಾಧ ಮಾಡಿದರೋ, ಅವರಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:7
14 ತಿಳಿವುಗಳ ಹೋಲಿಕೆ  

“ಈ ವಿಷಯಗಳಲ್ಲಿ ಯಾರಾದರು ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.


ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು


“ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪ ಮಾಡಿದವರೆಂದು ಒಪ್ಪಿಕೊಂಡು, ನನಗೆ ವಿರೋಧವಾಗಿ ನಡೆದದ್ದರಿಂದಲೇ


ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II


ಈ ಪ್ರಾಯಶ್ಚಿತ್ತ ಹಾಗು ದೋಷಪರಿಹಾರಕ ಬಲಿ ಹೋಮ ಶೇಷಗಳಿಗೆ ಇರುವ ವಿಧಿ ಒಂದೇ; ಈ ಹೋಮಶೇಷಗಳು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕವು.


“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.


ತಾವು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪರಿಹಾರಾರ್ಥವಾಗಿ ತಂದ ಟಗರಿನಿಂದ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದಾಗ ಅವರಿಗೆ ಕ್ಷಮೆ ದೊರಕುವುದು.


ನಾನು ಅವರಿಗೆ ವಿರುದ್ಧವಾಗಿ ವರ್ತಿಸಿ ಶತ್ರುದೇಶದಲ್ಲಿ ಸೆರೆ ಸೇರಿಸಬೇಕಾಯಿತೆಂದು ಅರಿತುಕೊಂಡು, ತಮ್ಮ ಮೊಂಡುತನವನ್ನು ಬಿಟ್ಟು, ನನ್ನ ಆಜ್ಞೆಗೆ ತಲೆಬಾಗಿ, ತಮ್ಮ ಪಾಪ ಪರಿಣಾಮದ ಶಿಕ್ಷೆಯನ್ನು ಸ್ವೀಕರಿಸಿದ್ದೇ ಆದರೆ,


ದಂಡವನ್ನು ತೆಗೆದುಕೊಳ್ಳ ತಕ್ಕವನು ತೀರಿಹೋಗಿ ಬಾಧ್ಯಸ್ಥನೂ ಇಲ್ಲದ ಪಕ್ಷಕ್ಕೆ ಆ ದ್ರವ್ಯ ಸರ್ವೇಶ್ವರನಿಗೆ ಸೇರಬೇಕು. ಅದು ಮತ್ತು ದೋಷಪರಿಹಾರಕ್ಕಾಗಿ ಅರ್ಪಿಸಲ್ಪಡುವ ಪ್ರಾಯಶ್ಚಿತ್ತ ಬಲಿಪ್ರಾಣಿಯಾದ ಟಗರು ಇವೆರಡೂ ಯಾಜಕನಿಗೆ ಸೇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು