Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 5:9 - ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲಿನ ಜನರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ಪವಿತ್ರ ವಸ್ತುಗಳೆಲ್ಲವೂ ಯಾಜಕನವುಗಳಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲರು ಪರಿಶುದ್ಧವಾದ ವಸ್ತುಗಳಿಂದ ಪ್ರತ್ಯೇಕಿಸಿ ತರುವ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲ್ಯರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ದೇವರ ವಸ್ತುಗಳೆಲ್ಲಾ ಯಾಜಕನವುಗಳಾಗಿಯೇ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9-10 “ಒಬ್ಬನು ದೇವರಿಗೆ ವಿಶೇಷ ಕಾಣಿಕೆಯನ್ನು ಅರ್ಪಿಸಿದರೆ, ಅದನ್ನು ಸ್ವೀಕರಿಸುವ ಯಾಜಕನು ತನಗಾಗಿ ಅದನ್ನು ಇಟ್ಟುಕೊಳ್ಳಬಹುದು. ಅದು ಅವನದಾಗಿರುತ್ತದೆ. ಒಬ್ಬನು ಈ ವಿಶೇಷ ಕಾಣಿಕೆಗಳನ್ನು ಕೊಡಬೇಕಾಗಿಲ್ಲ. ಆದರೆ ಅವನು ಅವುಗಳನ್ನು ಕೊಟ್ಟರೆ ಅವು ಯಾಜಕನಿಗೆ ಸೇರುತ್ತವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲರು ತರುವ ಸಕಲ ಪರಿಶುದ್ಧವಾದ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 5:9
19 ತಿಳಿವುಗಳ ಹೋಲಿಕೆ  

“ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರಿಗೂ ಸಲ್ಲಬೇಕು. ಸದಾಕಾಲಕ್ಕೂ ಇದನ್ನು ನಾನು ನಿನಗೆ ಅನುಗ್ರಹಿಸಿದ್ದೇನೆ. ಇದು ನನ್ನ ಸನ್ನಿಧಿಯಲ್ಲಿ ನಿನ್ನೊಡನೆ ಮತ್ತು ನಿನ್ನ ಸಂತತಿಯೊಡನೆ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”


ಶಾಶ್ವತ ನಿಯಮವಾಗಿ ಇಸ್ರಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು, ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟವು. ಇಸ್ರಯೇಲರು ಸಮಾಧಾನದ ಬಲಿದಾನಕ್ಕಾಗಿ ಪ್ರಾಣಿಗಳನ್ನು ವಧಿಸಿ ಸರ್ವೇಶ್ವರನಾದ ನನಗೆ ಕಾಣಿಕೆಯನ್ನು ಅರ್ಪಿಸುವಾಗಲೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.


ಅದು ಮಹಾಪರಿಶುದ್ಧವಾಗಿರುವುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ಊಟಮಾಡಿ. ಜನರು ಸರ್ವೇಶ್ವರನಿಗೆ ಸಮರ್ಪಿಸುವ ಹೋಮದ್ರವ್ಯಗಳಲ್ಲಿ ಅದು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲತಕ್ಕದೆಂದು ಅಪ್ಪಣೆಯಾಗಿದೆ.


ಅದು ಮಹಾಪರಿಶುದ್ಧವಾದ್ದರಿಂದ ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಅದನ್ನು ಪವಿತ್ರ ಸ್ಥಳದೊಳಗೆ, ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಊಟಮಾಡಬೇಕು.


ನೀವು ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಪ್ರಾಣಿಯ ಬಲತೊಡೆಯನ್ನು ಯಾಜಕನಿಗಾಗಿ ಪ್ರತ್ಯೇಕಿಸಿ ಕೊಡಬೇಕು.


ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸದಲ್ಲಿ ನೈವೇದ್ಯರೂಪವಾಗಿ ಆರತಿಯೆತ್ತುವ ಎದೆಯ ಭಾಗವನ್ನು ಮತ್ತು ಯಾಜಕನಿಗಾಗಿ ಪ್ರತ್ಯೇಕಿಸುವ ತೊಡೆಯನ್ನು ಸರ್ವೇಶ್ವರ ಇಸ್ರಯೇಲ್ ಜನರಿಂದ ತೆಗೆದುಕೊಂಡು ಮಹಾಯಾಜಕ ಆರೋನನಿಗೂ ಅವನ ವಂಶಜರಿಗೂ ಕೊಟ್ಟು, ಅದು ಶಾಶ್ವತ ನಿಯಮವಾಗಿ ಅವರಿಗೆ ಸಲ್ಲುವಂತೆ ಮಾಡಿದ್ದಾರೆ.


ನೀವು ಯಾಜಕನಿಗೆಂದೇ ಪ್ರತ್ಯೇಕವಾಗಿ ಆರತಿಯೆತ್ತಿ ಅರ್ಪಿಸಿದ ಎದೆಯ ಭಾಗವನ್ನು ಮತ್ತು ತೊಡೆಯನ್ನು ಯಾವುದಾದರೂ ಒಂದು ಶುದ್ಧ ಸ್ಥಳದಲ್ಲಿ ಊಟಮಾಡಬಹುದು. ನೀವೂ ನಿಮ್ಮ ಕುಟುಂಬದವರು ಅದನ್ನು ತಿನ್ನಬಹುದು. ಏಕೆಂದರೆ, ಇಸ್ರಯೇಲರು ಸಮರ್ಪಿಸುವ ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಇವು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.


ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗಲೆಲ್ಲಾ ಯಾಜಕರಿಗಾಗಿ ಪ್ರತ್ಯೇಕಿಸಿ ಆರತಿಯೆತ್ತಿ ಸಮರ್ಪಿಸುವ ಆ ಎದೆಯ ಭಾಗವನ್ನು, ತೊಡೆಯನ್ನು ಸರ್ವೇಶ್ವರನ ಸನ್ನಿಧಿಗೆ ತರಬೇಕು. ಸರ್ವೇಶ್ವರನ ಆಜ್ಞಾನುಸಾರ ಅವು ನಿಮಗೂ ನಿಮ್ಮ ವಂಶಜರಿಗೂ ಸಲ್ಲತಕ್ಕದ್ದು. ಇದು ಶಾಶ್ವತ ನಿಯಮ,” ಎಂದು ಹೇಳಿದನು.


ದಂಡವನ್ನು ತೆಗೆದುಕೊಳ್ಳ ತಕ್ಕವನು ತೀರಿಹೋಗಿ ಬಾಧ್ಯಸ್ಥನೂ ಇಲ್ಲದ ಪಕ್ಷಕ್ಕೆ ಆ ದ್ರವ್ಯ ಸರ್ವೇಶ್ವರನಿಗೆ ಸೇರಬೇಕು. ಅದು ಮತ್ತು ದೋಷಪರಿಹಾರಕ್ಕಾಗಿ ಅರ್ಪಿಸಲ್ಪಡುವ ಪ್ರಾಯಶ್ಚಿತ್ತ ಬಲಿಪ್ರಾಣಿಯಾದ ಟಗರು ಇವೆರಡೂ ಯಾಜಕನಿಗೆ ಸೇರಬೇಕು.


ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಈ ಕಪ್ಪವನ್ನು ಸರ್ವೇಶ್ವರನಿಗೆ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿದನು.


“ಆದರೆ ನಿಮ್ಮ ಬಳಿಯಿರುವ ದೇವರ ವಸ್ತುಗಳನ್ನು ಹಾಗು ಹರಕೆಮಾಡಿದ್ದನ್ನೂ ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು