ಅರಣ್ಯಕಾಂಡ 6:11 - ಕನ್ನಡ ಸತ್ಯವೇದವು C.L. Bible (BSI)11 ಯಾಜಕನು ದೋಷಪರಿಹಾರ ಬಲಿಯನ್ನಾಗಿ ಒಂದನ್ನೂ ಸಂಪೂರ್ಣ ದಹನ ಬಲಿಯನ್ನಾಗಿ ಇನ್ನೊಂದನ್ನೂ ಸಮರ್ಪಿಸಲಿ. ಹೀಗೆ ಶವಸೋಂಕಿದವನಿಗಾಗಿ ದೋಷಪರಿಹಾರಮಾಡಿ ಅವನ ತಲೆಗೂದಲು ಅಂದಿನಿಂದ ಪವಿತ್ರವೆಂದು ನಿರ್ಣಯಿಸಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯಾಜಕನು ದೋಷಪರಿಹಾರಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಇನ್ನೊಂದನ್ನೂ ಸಮರ್ಪಿಸಿ ಶವಸೋಂಕಿದವನಿಗೋಸ್ಕರ ದೋಷಪರಿಹಾರಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ಯಾಜಕನು ಒಂದನ್ನು ದೋಷಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಅವನಿಗೆ ಹೆಣವು ಸೋಂಕಿ ಅವನು ಅಶುದ್ಧನಾದದ್ದರಿಂದ ಈ ಸರ್ವಾಂಗಹೋಮವು ಅವನಿಗೆ ಪ್ರಾಯಶ್ಚಿತ್ತ ಯಜ್ಞವಾಗಿದೆ. ಆ ಸಮಯದಲ್ಲಿ, ಅವನು ತನ್ನ ತಲೆಯ ಕೂದಲನ್ನು ಯೆಹೋವನಿಗೆ ಕಾಣಿಕೆಯಾಗಿ ಮತ್ತೆ ಹರಕೆ ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯಾಜಕನು ಒಂದನ್ನು ದೋಷಪರಿಹಾರಕ ಬಲಿಯಾಗಿಯೂ, ಇನ್ನೊಂದನ್ನು ದಹನಬಲಿಯಾಗಿ ಅರ್ಪಿಸಿ, ಅವರು ಶವದ ಹತ್ತಿರವಿದ್ದು ಪಾಪಮಾಡಿದ್ದರಿಂದ, ಅವರಿಗೋಸ್ಕರ ಆ ದಿವಸದಲ್ಲಿ ಅವರ ತಲೆಯನ್ನು ಪ್ರತಿಷ್ಠಿಸಬೇಕು. ಅಧ್ಯಾಯವನ್ನು ನೋಡಿ |