ಅರಣ್ಯಕಾಂಡ 6:15 - ಕನ್ನಡ ಸತ್ಯವೇದವು C.L. Bible (BSI)15 ಇದಲ್ಲದೆ ಒಂದು ಬುಟ್ಟಿ ತುಂಬ ಎಣ್ಣೆಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡಬುಗಳು ಮತ್ತು ಮೇಲೆ ಹೇಳಿದ ಬಲಿಗಳ ಸಮೇತ ಕೊಡಬೇಕಾದ ಧಾನ್ಯದ್ರವ್ಯ-ಪಾನದ್ರವ್ಯಗಳು, ಇವುಗಳನ್ನೆಲ್ಲಾ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡುಬುಗಳು ಇವುಗಳನ್ನೂ ಮೇಲೆ ಕಂಡ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಶುದ್ಧವಾದ ಹಿಟ್ಟಿನಿಂದ ಮತ್ತು ಎಣ್ಣೆಯಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆಹಾಕಿ ಮಾಡಿದ ಹುಳಿಯಿಲ್ಲದ ತೆಳುವಾದ ರೊಟ್ಟಿಗಳನ್ನೂ ಒಂದು ಪುಟ್ಟಿತುಂಬಾ ಸಮರ್ಪಿಸಬೇಕು; ಅಲ್ಲದೆ ಮೇಲೆ ವಿವರಿಸಿದ ಯಜ್ಞಗಳೊಡನೆ ಕೊಡಬೇಕಾದ ಧಾನ್ಯದ್ರವ್ಯಗಳನ್ನೂ ಪಾನದ್ರವ್ಯಗಳನ್ನೂ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳ ಒಂದು ಬುಟ್ಟಿಯನ್ನೂ, ಎಣ್ಣೆ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ, ಧಾನ್ಯದ್ರವ್ಯ ಪಾನದ್ರವ್ಯ ಇವುಗಳನ್ನೆಲ್ಲಾ ಅರ್ಪಣೆಯಾಗಿ ತರಬೇಕು. ಅಧ್ಯಾಯವನ್ನು ನೋಡಿ |