Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:17 - ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಟಗರನ್ನೂ ಬುಟ್ಟಿ ತುಂಬಿರುವ ಹುಳಿಯಿಲ್ಲದ ರೊಟ್ಟಿಗಳನ್ನೂ ಸರ್ವೇಶ್ವರನಿಗೆ ಸಮಾಧಾನ ಯಜ್ಞವಾಗಿ ಸಮರ್ಪಿಸಬೇಕು. ತಂದ ಧಾನ್ಯದ್ರವ್ಯ - ಪಾನದ್ರವ್ಯಗಳನ್ನು ಯಾಜಕನು ನೈವೇದ್ಯ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಟಗರನ್ನೂ ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ ಯೆಹೋವನಿಗೆ ಸಮಾಧಾನ ಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯಾಜಕನು ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನು ಯೆಹೋವನಿಗೆ ಸಮರ್ಪಿಸುವನು. ಬಳಿಕ ಅವನು ಟಗರನ್ನು ವಧಿಸಿ ಸಮಾಧಾನಯಜ್ಞವಾಗಿ ಅರ್ಪಿಸುವನು. ಅವನು ಅದನ್ನು ಧಾನ್ಯಸಮರ್ಪಣೆ ಮತ್ತು ಪಾನದ್ರವ್ಯ ಸಮರ್ಪಣೆಯೊಂದಿಗೆ ಅರ್ಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯ ಸಂಗಡ ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಅರ್ಪಿಸಬೇಕು. ಇದಲ್ಲದೆ ಯಾಜಕನು ಅವರ ಧಾನ್ಯವನ್ನೂ, ಪಾನದ್ರವ್ಯವನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:17
3 ತಿಳಿವುಗಳ ಹೋಲಿಕೆ  

ಯಾಜಕನು ಇವುಗಳನ್ನು ಸರ್ವೇಶ್ವರನ ಸನ್ನಿಧಿಗೆ ತಂದು ನಾಜೀರ ವ್ರತ ಪಾಪಪರಿಹಾರಕ ಬಲಿಯನ್ನೂ ದಹನಬಲಿಯನ್ನೂ ಸಮರ್ಪಿಸಬೇಕು.


ಬಳಿಕ ನಾಜೀರ ವ್ರತಸ್ಥನು ತನ್ನ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನ ಬಲಿಯ ದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.


ಆಮೇಲೆ ಆ ಪುಟ್ಟಿಯನ್ನು, ಆ ಹೋರಿಯನ್ನು ಹಾಗು ಟಗರುಗಳನ್ನು ತಂದಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು