ಅರಣ್ಯಕಾಂಡ 6:20 - ಕನ್ನಡ ಸತ್ಯವೇದವು C.L. Bible (BSI)20 ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಇದು ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ ಯಾಜಕರಿಗೋಸ್ಕರ ಪ್ರತ್ಯೇಕಿಸುವ ತೊಡೆಯಂತೆಯೂ ಯಾಜಕನಿಗೆ ಸಲ್ಲಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೈವೇದ್ಯವಾಗಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ವಿಶೇಷ ಕಾಣಿಕೆಯಾಗಿ ನಿವಾಳಿಸಬೇಕು. ಇವುಗಳು ಪವಿತ್ರವಾಗಿದ್ದು ಯಾಜಕರ ಪಾಲಾಗುತ್ತವೆ. ಅಲ್ಲದೆ ಮೀಸಲಾಗಿಟ್ಟಿರುವ ನಿವಾಳಿಸಲ್ಪಟ್ಟ ಕಾಣಿಕೆಯ ಎದೆಯ ಭಾಗ ಮತ್ತು ತೊಡೆಯ ಭಾಗ ಸಹ ಯಾಜಕನ ಭಾಗವಾಗಿರುತ್ತದೆ. ಇದರ ನಂತರ ನಾಜೀರನು ದ್ರಾಕ್ಷಾರಸವನ್ನು ಕುಡಿಯಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು. ಅಧ್ಯಾಯವನ್ನು ನೋಡಿ |