Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 6:23 - ಕನ್ನಡ ಸತ್ಯವೇದವು C.L. Bible (BSI)

23 ”ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು: ‘ನೀವು ಇಸ್ರಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಹೇಳಬೇಕು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು - ನೀವು ಇಸ್ರಾಯೇಲ್ಯರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನೀನು ಆರೋನನಿಗೂ ಅವನ ಪುತ್ರರಿಗೂ ಹೀಗೆ ಆಜ್ಞಾಪಿಸು: ನೀವು ಇಸ್ರೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ನೀನು ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 6:23
27 ತಿಳಿವುಗಳ ಹೋಲಿಕೆ  

ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.


ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.


ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.


ಆ ದಿನ ಅವರನ್ನು ಆಶೀರ್ವದಿಸುತ್ತಾ ಹೀಗೆಂದನು: "ಎಫ್ರಯಿಮ್ - ಮನಸ್ಸೆಯಂತೆ ನಿಮ್ಮನ್ನೂ ಅಭಿವೃದ್ಧಿಗೊಳಿಸಲಿ ದೇವರು! ಹೀಗೆ ನಿಮ್ಮ ಹೆಸರನ್ನು ಉಚ್ಚರಿಸುತ್ತಾ ಇತರರನ್ನು ಆಶೀರ್ವದಿಸುವರು ಇಸ್ರಯೇಲರು". ಈ ರೀತಿಯಾಗಿ ಅವನು ಎಫ್ರಯಿಮನನ್ನು ಮನಸ್ಸೆಗಿಂತ ಮುಂದಿಟ್ಟನು.


ಪಿತನಾದ ದೇವರಿಂದಲೂ ಅವರ ಪುತ್ರ ಯೇಸುಕ್ರಿಸ್ತರಿಂದಲೂ ಕೃಪೆ, ಕರುಣೆ, ಶಾಂತಿ, ಸಮಾಧಾನಗಳು ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮಲ್ಲಿ ನೆಲೆಸಲಿ!


ಬಳಿಕ ಜೋಸೆಫನು ತನ್ನ ತಂದೆ ಯಕೋಬನನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. ಯಕೋಬನು ಫರೋಹನನ್ನು ಆಶೀರ್ವದಿಸಿದನು.


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಆಶೀರ್ವದಿಸುವವನು, ಆಶೀರ್ವಾದ ಪಡೆದವನಿಗಿಂತ ದೊಡ್ಡವನು ಎನ್ನುವುದು ನಿರ್ವಿವಾದ.


ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಅನುಗ್ರಹ ಮತ್ತು ಶಾಂತಿಸಮಾಧಾನ ಲಭಿಸಲಿ!


ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.


“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ಫರೋಹನನ್ನು ಆಶೀರ್ವದಿಸಿ, ಅವನ ಸನ್ನಿಧಿಯಿಂದ ಹೊರಟುಹೋದನು.


ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


“ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!”


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಕರ್ತನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳಿದುಕೊಂಡು ಅವರನ್ನು ಆಶೀರ್ವದಿಸಿದನು.


ಸರ್ವೇಶ್ವರ ಮೋಶೆಗೆ ಹೀಗೆಂದರು:


ಇಸ್ರಯೇಲ್ ಸರ್ವಸಮಾಜದವರನ್ನು ಆಶೀರ್ವದಿಸುತ್ತಾ ಗಟ್ಟಿಯಾಗಿ ಹೀಗೆಂದನು:


ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು