Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:10 - ಕನ್ನಡ ಸತ್ಯವೇದವು C.L. Bible (BSI)

10 ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೋಶೆಯು ಯಜ್ಞವೇದಿಯನ್ನು ಅಭಿಷೇಕಿಸಿದ ದಿನದಲ್ಲಿ, ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯಜ್ಞವೇದಿಯು ಅಭಿಷೇಕಿಸಲ್ಪಟ್ಟ ದಿನದಲ್ಲಿ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ವೇದಿಕೆಯು ಅಭಿಷೇಕಿಸಲ್ಪಟ್ಟಾಗ, ಯಜ್ಞವೇದಿಕೆಯ ಆರಂಭಕ್ಕಾಗಿ ಪ್ರಧಾನರು ಸಹ ತಮ್ಮ ಕಾಣಿಕೆಗಳನ್ನು ವೇದಿಕೆಯ ಮುಂದೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಪ್ರತಿಷ್ಠೆಗಾಗಿ ಅದರ ಮುಂದೆ ಬಂದು, ಪ್ರಧಾನರು ತಮ್ಮ ಕಾಣಿಕೆಗಳನ್ನು ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:10
12 ತಿಳಿವುಗಳ ಹೋಲಿಕೆ  

ತರುವಾಯ ಎಂಟನೆಯ ದಿನದಲ್ಲಿ ಸಭೆಸೇರಿದರು. ಹೀಗೆ ಏಳು ದಿವಸ ಬಲಿಪೀಠ ಪ್ರತಿಷ್ಠೆಯನ್ನೂ ಇನ್ನು ಏಳು ದಿವಸ ಜಾತ್ರೆಯನ್ನೂ ನಡೆಸಿದರು.


ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು.


ಅರಸ ಸೊಲೊಮೋನನು ಬಲಿಯಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ದೇವಾಲಯವನ್ನು ಪ್ರತಿಷ್ಠಿಸಿದರು.


ಸೊಲೊಮೋನನು ಸರ್ವೇಶ್ವರನಿಗೆ ಅರ್ಪಿಸಿದ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಒಂದು ಲಕ್ಷದ ಇಪ್ಪತ್ತುಸಾವಿರ; ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ಸರ್ವೇಶ್ವರನ ಆಲಯವನ್ನು ಪ್ರತಿಷ್ಠಿಸಿದರು.


“ಮತ್ತು ಸೇನಾಧಿಪತಿಗಳು ಅವರಿಗೆ, ‘ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಗೃಹಪ್ರವೇಶಮಾಡದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಂಡಾನು.


ನಿನಗೆನ್ನ ವಂದನೆ ಪ್ರಭು, ನನ್ನನುದ್ಧರಿಸಿದೆ I ಶತ್ರುಗಳೆನ್ನ ಕುರಿತು ಹಿಗ್ಗದಂತೆ ಮಾಡಿದೆ II


ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.


ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.


ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದನು.


ಬಲಿಪೀಠವನ್ನು ಅಭಿಷೇಕಿಸಲಾದ ದಿನದಂದು ಇಸ್ರಯೇಲರ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಸಮರ್ಪಿಸಿದ ಕಾಣಿಕೆಗಳು ಒಟ್ಟು: 12 ಬೆಳ್ಳಿಯ ಹರಿವಾಣಗಳು; 12 ಬೆಳ್ಳಿಯ ಬಟ್ಟಲುಗಳು; 12 ಚಿನ್ನದ ಧೂಪಾರತಿಗಳು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು