Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:12 - ಕನ್ನಡ ಸತ್ಯವೇದವು C.L. Bible (BSI)

12 ಮೊದಲನೆಯ ದಿನ ಕಾಣಿಕೆ ತಂದೊಪ್ಪಿಸಿದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗ ನಹಶೋನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮೊದಲನೆಯ ದಿನದಲ್ಲಿ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಕುಲಾಧಿಪತಿಯಾದ ಅಮ್ಮೀನಾದಾಬನ ಮಗನಾದ ನಹಶೋನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮೊದಲನೆಯ ದಿನದಲ್ಲಿ ಕಾಣಿಕೆ ತಂದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗನಾದ ನಹಶೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12-83 ಹನ್ನೆರಡು ಪ್ರಧಾನರಲ್ಲಿ ಪ್ರತಿಯೊಬ್ಬನೂ ತನ್ನ ಕಾಣಿಕೆಯನ್ನು ತಂದನು. ಅವರು ಕೊಟ್ಟ ಕಾಣಿಕೆಗಳು ಹೀಗಿವೆ: ಪ್ರತಿಯೊಬ್ಬ ಪ್ರಧಾನನು ಮೂರುಕಾಲು ಪೌಂಡು ತೂಕವುಳ್ಳ ಬೆಳ್ಳಿಯ ತಟ್ಟೆಯನ್ನೂ ಒಂದು ಮುಕ್ಕಾಲು ಪೌಂಡು ತೂಕವುಳ್ಳ ಬೆಳ್ಳಿಯ ಬಟ್ಟಲನ್ನೂ ತಂದನು. ಇವೆರಡನ್ನೂ ಅಧಿಕೃತ ಅಳತೆಯಿಂದ ತೂಕ ಮಾಡಲಾಯಿತು. ಧಾನ್ಯಸಮರ್ಪಣೆಗಾಗಿ ಉಪಯೋಗವಾಗುವ ಎಣ್ಣೆ ಬೆರೆಸಿದ ಶ್ರೇಷ್ಠ ಗೋಧಿಹಿಟ್ಟನ್ನು ಬಟ್ಟಲಲ್ಲಿ ಮತ್ತು ತಟ್ಟೆಯಲ್ಲಿ ತುಂಬಿಡಲಾಗಿತ್ತು. ಧೂಪದ್ರವ್ಯ ತುಂಬಿದ್ದ ನಾಲ್ಕು ತೊಲೆ ತೂಕವುಳ್ಳ ಚಿನ್ನದ ಧೂಪಾರತಿಯನ್ನೂ ಒಂದು ಎಳೆಯ ಹೋರಿಯನ್ನೂ ಸರ್ವಾಂಗಹೋಮಕ್ಕಾಗಿ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಗಂಡು ಕುರಿಮರಿಯನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಸಮಾಧಾನಯಜ್ಞಕ್ಕಾಗಿ ಎರಡು ಎತ್ತುಗಳನ್ನೂ ಐದು ಟಗರುಗಳನ್ನೂ ಐದು ಹೋತಗಳನ್ನೂ ಒಂದು ವರ್ಷದ ಐದು ಗಂಡು ಕುರಿಮರಿಗಳನ್ನೂ ಪ್ರತಿಯೊಬ್ಬ ಯಾಜಕನೂ ತಂದನು. ಇವೆಲ್ಲವೂ ಯಜ್ಞವಾಗಿ ಸಮರ್ಪಿಸಲ್ಪಟ್ಟವು. ಮೊದಲನೆಯ ದಿನದಲ್ಲಿ ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗನಾದ ನಹಶೋನನು ತನ್ನ ಕಾಣಿಕೆಗಳನ್ನು ತಂದನು. ಎರಡನೆಯ ದಿನದಲ್ಲಿ ಇಸ್ಸಾಕಾರ್ ಕುಲಾಧಿಪತಿ ಚೂವಾರನ ಮಗನಾದ ನೆತನೇಲನು ತನ್ನ ಕಾಣಿಕೆಗಳನ್ನು ತಂದನು. ಮೂರನೆಯ ದಿನದಲ್ಲಿ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗನಾದ ಎಲೀಯಾಬನು ತನ್ನ ಕಾಣಿಕೆಗಳನ್ನು ತಂದನು. ನಾಲ್ಕನೆಯ ದಿನದಲ್ಲಿ ರೂಬೇನ್ ಕುಲಾಧಿಪತಿ ಶೆದೇಯೂರನ ಮಗನಾದ ಎಲೀಚೂರನು ತನ್ನ ಕಾಣಿಕೆಗಳನ್ನು ತಂದನು. ಐದನೆಯ ದಿನದಲ್ಲಿ ಸಿಮೆಯೋನ್ ಕುಲಾಧಿಪತಿ ಚೂರೀಷದ್ದೈಯ ಮಗನಾದ ಶೆಲುಮೀಯೇಲನು ತನ್ನ ಕಾಣಿಕೆಗಳನ್ನು ತಂದನು. ಆರನೆಯ ದಿನದಲ್ಲಿ ಗಾದ್ ಕುಲಾಧಿಪತಿ ದೆಗೂವೇಲನ ಮಗನಾದ ಎಲ್ಯಾಸಾಫನು ತನ್ನ ಕಾಣಿಕೆಗಳನ್ನು ತಂದನು. ಏಳನೆಯ ದಿನದಲ್ಲಿ ಎಫ್ರಾಯೀಮ್ ಕುಲಾಧಿಪತಿ ಅಮ್ಮೀಹೂದನ ಮಗನಾದ ಎಲೀಷಾಮನು ತನ್ನ ಕಾಣಿಕೆಗಳನ್ನು ತಂದನು. ಎಂಟನೆಯ ದಿನದಲ್ಲಿ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗನಾದ ಗಮ್ಲೀಯೇಲನು ತನ್ನ ಕಾಣಿಕೆಗಳನ್ನು ತಂದನು. ಒಂಭತ್ತನೆಯ ದಿನದಲ್ಲಿ ಬೆನ್ಯಾಮೀನ್ ಕುಲಾಧಿಪತಿ ಗಿದ್ಯೋನಿಯ ಮಗನಾದ ಅಬೀದಾನನು ತನ್ನ ಕಾಣಿಕೆಗಳನ್ನು ತಂದನು. ಹತ್ತನೆಯ ದಿನದಲ್ಲಿ ದಾನ್ ಕುಲಾಧಿಪತಿ ಅಮ್ಮೀಷದ್ದೈನ ಮಗನಾದ ಅಹೀಗೆಜರನು ತನ್ನ ಕಾಣಿಕೆಗಳನ್ನು ತಂದನು. ಹನ್ನೊಂದನೆಯ ದಿನದಲ್ಲಿ ಆಶೇರ್ ಕುಲಾಧಿಪತಿ ಒಕ್ರಾನನ ಮಗನಾದ ಪಗೀಯೇಲನು ತನ್ನ ಕಾಣಿಕೆಗಳನ್ನು ತಂದನು. ಹನ್ನೆರಡನೆಯ ದಿನದಲ್ಲಿ ನಫ್ತಾಲಿ ಕುಲಾಧಿಪತಿ ಏನಾನನ ಮಗನಾದ ಅಹೀರನು ತನ್ನ ಕಾಣಿಕೆಗಳನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮೊದಲನೆಯ ದಿವಸದಲ್ಲಿ ತನ್ನ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅಮ್ಮೀನಾದಾಬನ ಮಗ ನಹಶೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:12
13 ತಿಳಿವುಗಳ ಹೋಲಿಕೆ  

ದಾವೀದ್ ಜೆಸ್ಸೆಯನಿಗೆ, ಜೆಸ್ಸೆಯ ಓಬೇದನಿಗೆ, ಓಬೇದ್ ಬೋವಜನಿಗೆ, ಬೋವಜ್ ಸಲ್ಮೋನನಿಗೆ, ಸಲ್ಮೋನ್ ನಹಸ್ಸೋನನಿಗೆ ಹುಟ್ಟಿದರು.


ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್,


ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿದ್ದವನು ಅಮ್ಮೀನಾದಾಬನ ಮಗ ನಹಶೋನನು.


“ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಅಮ್ಮಿನಾದಾಬನ ಮಗ ನಹಶೋನ.


ಯೆಹೂದ ಕುಲದಿಂದ ಅಮ್ಮೀನಾದಾಬನ ಮಗ ನಹಶೋನ್


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಯೆಹೂದನೇ, ವಂದಿಸುವರು ನಿನ್ನನು ಸಹೋದರರು ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು.


ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದನು.


ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು


ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.


ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.


ನಿಮಗೆ ಸಹಾಯಕರಾಗಿರಬೇಕಾದವರ ಹೆಸರುಗಳು ಇವು: ರೂಬೇನ್ ಕುಲದಿಂದ ಶೆದೇಯೂರನ ಮಗ ಎಲೀಚೂರ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು