Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 7:15 - ಕನ್ನಡ ಸತ್ಯವೇದವು C.L. Bible (BSI)

15 ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರುಷದ ಕುರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 7:15
20 ತಿಳಿವುಗಳ ಹೋಲಿಕೆ  

ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.


ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.


ದೇವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನಿಗೂ ಆ ಸತ್ಸಂಬಂಧ ದೊರಕುವಂತೆ ಕ್ರಿಸ್ತಯೇಸು ಧರ್ಮಶಾಸ್ತ್ರವನ್ನು ಇತಿಗೊಳಿಸಿದರು.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು!


ಧೂಪ ದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ.


ಪಾಪಪರಿಹಾರಕ ಬಲಿಗಾಗಿ ಒಂದು ಹೋತ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು