ಅರಣ್ಯಕಾಂಡ 7:9 - ಕನ್ನಡ ಸತ್ಯವೇದವು C.L. Bible (BSI)9 ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ; ದೇವದರ್ಶನದ ಗುಡಾರದ ಸಾಮಾನುಗಳನ್ನು ವಹಿಸುವದೇ ಅವರಿಗೆ ನೇಮಕವಾದ ಕೆಲಸ; ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಮೋಶೆಯು ಕೆಹಾತ್ಯರಿಗೆ ಎತ್ತುಗಳನ್ನಾಗಲಿ ಬಂಡಿಗಳನ್ನಾಗಲಿ ಕೊಡಲಿಲ್ಲ. ಯಾಕೆಂದರೆ ಅವರು ಪವಿತ್ರವಸ್ತುಗಳನ್ನು ತಮ್ಮ ಭುಜದ ಮೇಲೆ ಹೊರಬೇಕು. ಅವರಿಗೆ ಈ ಕೆಲಸವು ಕೊಡಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದರೆ ಕೊಹಾತ್ಯರಿಗೆ ಯಾವುದನ್ನೂ ಕೊಡಲಿಲ್ಲ. ಏಕೆಂದರೆ ಅವರು ತಮ್ಮ ಹೆಗಲುಗಳ ಮೇಲೆ ಪರಿಶುದ್ಧಸ್ಥಳದ ವಸ್ತುಗಳನ್ನು ಹೊತ್ತುಕೊಂಡು ಹೋಗುವುದೇ ಅವರಿಗೆ ಸೇವೆಯಾಗಿತ್ತು. ಅಧ್ಯಾಯವನ್ನು ನೋಡಿ |