ಅರಣ್ಯಕಾಂಡ 8:16 - ಕನ್ನಡ ಸತ್ಯವೇದವು C.L. Bible (BSI)16 ಇಸ್ರಯೇಲರಲ್ಲಿ ಇವರೇ ನನಗೆ ಸಂಪೂರ್ಣವಾಗಿ ಸಮರ್ಪಿತರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಯೇಲರ ಜೇಷ್ಠಪುತ್ರರಿಗೆ, ಬದಲಾಗಿ ನಾನು ಇವರನ್ನೇ ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇಸ್ರಾಯೇಲರಲ್ಲಿ ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇಸ್ರಾಯೇಲ್ಯರಲ್ಲಿ ಇವರು ನನಗೆ ಸಂಪೂರ್ಣವಾಗಿ ವಶವಾದವರು; ಪ್ರಥಮಗರ್ಭಕ್ಕೆ ಬದಲಾಗಿ ಅಂದರೆ ಇಸ್ರಾಯೇಲ್ಯರ ಚೊಚ್ಚಲುಮಕ್ಕಳಿಗೆ ಬದಲಾಗಿ ನಾನು ಇವರನ್ನೇ ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯಾಕೆಂದರೆ ಲೇವಿಯರು ಇಸ್ರೇಲರ ಮಧ್ಯದಿಂದ ನನಗಾಗಿ ಸಂಪೂರ್ಣವಾಗಿ ಪ್ರತಿಷ್ಠಿತರಾಗಿದ್ದಾರೆ. ಇಸ್ರೇಲರ ಚೊಚ್ಚಲು ಗಂಡುಮಕ್ಕಳಿಗೆ ಬದಲಾಗಿ ನಾನು ಇವರನ್ನೇ ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ ಅವರು ಇಸ್ರಾಯೇಲರಲ್ಲಿ ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಾಯೇಲರ ಜೇಷ್ಠಪುತ್ರರಿಗೆ ಬದಲಾಗಿ ನಾನು ಅವರನ್ನೇ ನನಗೋಸ್ಕರ ತೆಗೆದುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |