Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:24 - ಕನ್ನಡ ಸತ್ಯವೇದವು C.L. Bible (BSI)

24 “ಲೇವಿಯರು ಅನುಸರಿಸಬೇಕಾದ ಪದ್ಧತಿ ಇದು - ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನವರು ದೇವದರ್ಶನದ ಗುಡಾರದಲ್ಲಿ ಸೇವೆಮಾಡಲು ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಇಪ್ಪತ್ತೈದು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನ ಗುಡಾರದ ಸೇವಮಂಡಳಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಲೇವಿಯರು ಅನುಸರಿಸಬೇಕಾದ ಪದ್ಧತಿ ಏನಂದರೆ - ಇಪ್ಪತ್ತೈದು ವರುಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರು ದೇವದರ್ಶನದ ಗುಡಾರದ ಸೇವಕಮಂಡಲಿಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಲೇವಿಯರು ಅನುಸರಿಸಬೇಕಾದ ಪದ್ಧತಿ ಏನೆಂದರೆ: ಲೇವಿಯರಲ್ಲಿ ಇಪ್ಪತ್ತೈದು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿರುವ ಗಂಡಸರು ದೇವದರ್ಶನಗುಡಾರದ ಸೇವೆಯ ದಳದಲ್ಲಿ ಕೆಲಸಮಾಡಲು ಯೋಗ್ಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಲೇವಿಯರಿಗೆ ಸಂಬಂಧಪಟ್ಟದ್ದು ಇದಾಗಿದೆ: ಇಪ್ಪತ್ತೈದು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ದೇವದರ್ಶನದ ಗುಡಾರದ ಸೇವೆಗಾಗಿ ಒಳಗೆ ಸೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:24
16 ತಿಳಿವುಗಳ ಹೋಲಿಕೆ  

ಮೂವತ್ತು ವರ್ಷ ಮೊದಲ್ಗೊಂಡು ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆ ಮೂವತ್ತೆಂಟು ಸಾವಿರವಿತ್ತು.


ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.


ಯಾವ ಸೈನಿಕ ಸ್ವಂತ ಖರ್ಚಿನಿಂದ ಸಮರಕ್ಕೆ ನಿಲ್ಲುತ್ತಾನೆ? ಯಾವ ತೋಟಗಾರ ತನ್ನ ಸ್ವಂತ ದ್ರಾಕ್ಷಿಯ ತೋಟದಿಂದ ದ್ರಾಕ್ಷಿಯ ಫಲವನ್ನು ತಿನ್ನದಿರುತ್ತಾನೆ? ಯಾವ ಗೌಳಿಗ ತಾನು ಸಾಕಿದ ಹಸುವಿನ ಹಾಲನ್ನು ಕುಡಿಯದಿರುತ್ತಾನೆ?


ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.


ತಿಮೊಥೇಯನೇ, ನನ್ನ ಕುಮಾರನೇ, ಹಿಂದೆ ನಿನ್ನ ಕುರಿತು ಮಾಡಲಾಗಿರುವ ಪ್ರವಾದನೆಗಳಿಗೆ ಅನುಗುಣವಾಗಿ ನಾನು ನಿನಗೆ ಕೊಡುವ ಆಜ್ಞೆ ಇದು: ಪ್ರವಾದನೆಗಳಿಂದ ಪ್ರೇರಣೆ ಪಡೆದು ದಿಟ್ಟಹೋರಾಟವನ್ನು ಮಾಡು.


ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”


ದೇವದರ್ಶನದ ಗುಡಾರದ ಸೇವೆಮಾಡಲು ಯೋಗ್ಯರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡು.


ಇದಲ್ಲದೆ ಸರ್ವೇಶ್ವರ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:


ಅವರು ಐವತ್ತು ವರ್ಷದವರಾದ ನಂತರ ಆ ಸೇವಾ ಸಂಸ್ಥೆಯನ್ನು ಬಿಟ್ಟು ದೇವಸ್ಥಾನದ ಪರಿಚರ್ಯದಿಂದ ನಿವೃತ್ತರಾಗಬೇಕು.


ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರ ಹಾಗು ಆಯಾ ಉದ್ಯೋಗ ವರ್ಗಗಳಿಗನುಸಾರ ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಯಾಜಕರು, ಲೇವಿಯರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು