Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:3 - ಕನ್ನಡ ಸತ್ಯವೇದವು C.L. Bible (BSI)

3 ಅಂತೆಯೇ ಆ ದೀಪಗಳನ್ನು ಕ್ರಮವಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು. ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು; ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಬೀಳುವಂತೆ ಆ ದೀಪಗಳನ್ನು ಕ್ರಮವಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಂತೆಯೇ ಆರೋನನು ಮಾಡಿದನು. ಆರೋನನು ದೀಪಗಳನ್ನು ಸರಿಯಾದ ಸ್ಥಳದಲ್ಲಿಟ್ಟು ಅವುಗಳು ದೀಪಸ್ತಂಭದ ಎದುರಿನಲ್ಲಿ ಪ್ರಕಾಶಿಸುವಂತೆ ಮಾಡಿದನು. ಹೀಗೆ ಯೆಹೋವನು ಹೇಳಿದಂತೆಯೇ ಮೋಶೆಯು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆರೋನನು ಹಾಗೆಯೇ ಮಾಡಿ, ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಅದರ ದೀಪಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:3
5 ತಿಳಿವುಗಳ ಹೋಲಿಕೆ  

ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.


“ಆರೋನನು ದೇವಸ್ಥಾನದ ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಬೆಳಕು ಕೊಡುವಂತೆ ನೋಡಿಕೊಳ್ಳಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದರು.


ಆ ದೀಪಸ್ತಂಭದ ಬುಡಭಾಗವೂ ಅದರ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿದ್ದವು. ಸರ್ವೇಶ್ವರ ತೋರಿಸಿದ್ದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು.


ಚೊಕ್ಕ ಬಂಗಾರದ ದೀಪವೃಕ್ಷ, ಅದರ ಮೇಲಿಡಬೇಕಾದ ಹಣತೆಗಳು, ಅದರ ಉಪಕರಣಗಳು, ದೀಪಕ್ಕೆ ಬೇಕಾದ ಎಣ್ಣೆ ಇವುಗಳನ್ನೂ;


ಅದರ ಹಣತೆಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು