Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 8:7 - ಕನ್ನಡ ಸತ್ಯವೇದವು C.L. Bible (BSI)

7 ಅವರನ್ನು ಶುದ್ಧೀಕರಿಸುವ ವಿಧಾನ ಇದು: ಅವರ ಮೇಲೆ ಪಾಪ ಪರಿಹಾರಕ ಜಲವನ್ನು ಚಿಮುಕಿಸು. ಅವರು ಕ್ಷೌರ ಮಾಡಿಸಿಕೊಂಡು, ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗೆಂದರೆ: ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮುಕಿಸಬೇಕು. ಅವರು ಸರ್ವಾಂಗ ಕ್ಷೌರಮಾಡಿಸಿಕೊಳ್ಳಲಿ. ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರನ್ನು ಶುದ್ಧೀಕರಿಸಬೇಕಾದ ಕ್ರಮ ಹೇಗಂದರೆ - ನೀನು ಅವರ ಮೇಲೆ ದೋಷಪರಿಹಾರಕಜಲವನ್ನು ಚಿವಿುಕಿಸಬೇಕು; ಅವರು ಸರ್ವಾಂಗಕ್ಷೌರಮಾಡಿಸಿಕೊಂಡು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವರನ್ನು ಶುದ್ಧೀಕರಿಸುವ ಕ್ರಮ ಹೇಗೆಂದರೆ, ನೀನು ಅವರ ಮೇಲೆ ದೋಷಪರಿಹಾರಕ ಜಲವನ್ನು ಚಿಮಿಕಿಸಬೇಕು. ಬಳಿಕ ಅವರು ಸರ್ವಾಂಗಕ್ಷೌರ ಮಾಡಿಸಿಕೊಂಡು ತಮ್ಮ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಹೀಗೆ ತಮ್ಮನ್ನು ಶುದ್ಧಪಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವರನ್ನು ಶುದ್ಧಮಾಡುವುದಕ್ಕೆ ಅವರಿಗೆ ಮಾಡಬೇಕಾದದ್ದೇನೆಂದರೆ ಶುದ್ಧೀಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಅವರು ಸರ್ವಾಂಗ ಕ್ಷೌರ ಮಾಡಿಸಿಕೊಳ್ಳಲಿ. ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 8:7
24 ತಿಳಿವುಗಳ ಹೋಲಿಕೆ  

ಮನುಷ್ಯನ ಶವ ಸೋಂಕಿದವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಅವನು ಸರ್ವೇಶ್ವರನ ಗುಡಾರವನ್ನು ಅಪವಿತ್ರಪಡಿಸುತ್ತಾನೆ. ಅಂಥವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣ ನೀರನ್ನು ಅವನ ಮೇಲೆ ಚಿಮುಕಿಸದೆ ಇರುವ ಕಾರಣ ಅವನು ಮಡಿಗೆಟ್ಟವನು; ಅವನಿಗುಂಟಾದ ಮೈಲಿಗೆ ಅವನಲ್ಲಿ ಉಳಿದಿರುತ್ತದೆ.


ಬಳಿಕ ಮೋಶೆ ಆರೋನನನ್ನೂ ಅವನ ಪುತ್ರರನ್ನೂ ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನ ಮಾಡಿಸಿದನು.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಹೋತಹೋರಿಗಳ ರಕ್ತವನ್ನೂ ಯಜ್ಞಪಶುಗಳ ಬೂದಿಯನ್ನೂ ಮಲಿನರಾದವರ ಮೇಲೆ ಚಿಮುಕಿಸುವುದರ ಮೂಲಕ ಶಾರೀರಕ ಮೈಲಿಗೆಯನ್ನು ಹೋಗಲಾಡಿಸಿ ಅವರನ್ನು ಪರಿಶುದ್ಧಗೊಳಿಸಬಹುದಾದರೆ,


ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.


ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ಎಲ್ಲ ಬಟ್ಟೆಬರೆಗಳನ್ನೂ ತೊಗಲಿನ ಸಾಮಾನುಗಳನ್ನೂ ಮೇಕೆ ಕೂದಲಿನ ವಸ್ತ್ರಗಳನ್ನೂ ಹಾಗು ಮರದ ಸಾಮಾನುಗಳನ್ನೂ ಶುದ್ಧಮಾಡಿಕೊಳ್ಳಬೇಕು,” ಎಂದು ಹೇಳಿದನು.


ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಯೇ ಪಾಳೆಯದೊಳಗೆ ಬರಬೇಕು.


ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದುದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಂಜೆಯವರೆಗೆ ಅಶುದ್ಧನಾಗಿರುವನು.


ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.


ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದನು. ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ಪಾಪಪರಿಹಾರವನ್ನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು