Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:16 - ಕನ್ನಡ ಸತ್ಯವೇದವು C.L. Bible (BSI)

16 ಅದು ಸದಾ ಹಾಗೆಯೇ ಇರುತ್ತಿತ್ತು. ಆ ಮೇಘ ದೇವಸ್ಥಾನವನ್ನು ಆವರಿಸಿಕೊಳ್ಳುತ್ತಿತ್ತು; ರಾತ್ರಿವೇಳೆಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿತ್ಯವೂ ಹಾಗೆಯೇ ಕಾಣಿಸುತ್ತಿತ್ತು; ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿತ್ಯವೂ ಹಾಗೆಯೇ ಇರುವದು; ಮೇಘವು ದೇವಸ್ಥಾನವನ್ನು ಮುಚ್ಚಿಕೊಂಡಿರುವದು; ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೀಗೆ ಮೇಘವು ಯಾವಾಗಲೂ ದೇವದರ್ಶನಗುಡಾರವನ್ನು ಮುಚ್ಚಿಕೊಂಡಿರುವುದು. ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ಪ್ರಕಾರ ಯಾವಾಗಲೂ, ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:16
13 ತಿಳಿವುಗಳ ಹೋಲಿಕೆ  

ಹಗಲಲಿ ಅವರ ಮುಂದೆ ಸಾಗಿದಿರಿ ಮೇಘಸ್ತಂಭದಂತೆ ಇರುಳಲಿ ದಾರಿತೋರಿದಿರಿ ಬೆಳಕನೀವ ಅಗ್ನಿಸ್ತಂಭದಂತೆ.


ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.


ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.


ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ. ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು.


ಹಗಲೊಳು ಮೋಡವಿತ್ತನವರಿಗೆ ನೆರಳಿಗೋಸ್ಕರ I ಇರುಳೊಳು ಬೆಂಕಿಯಿತ್ತನವರಿಗೆ ಬೆಳಕಿಗೋಸ್ಕರ II


ಹಗಲಲಿ ಕರೆದೊಯ್ದನು ಮೇಘದ ನೆರಳಲಿ I ಇರುಳೊಳು ನಡೆಸಿದನು ಜ್ವಾಲೆಯ ಬೆಳಕಲಿ II


ಹೀಗಿದ್ದರು ನೀವಾದಿರಿ ಅವರಿಗೆ ಕರುಣಾನಿಧಿ ತೊರೆದುಬಿಡಲಿಲ್ಲ ನೀವವರನು ಮರುಭೂಮಿಯಲಿ. ಬಿಟ್ಟುಹೋಗಲಿಲ್ಲ ದಾರಿತೋರಿದಾ ಮೇಘಸ್ತಂಭ ಹಗಲಲಿ ಮುನ್ನಡೆಯಿತು ಬೆಳಕನೀಯುತಾ ಅಗ್ನಿಸ್ತಂಭ ಇರುಳಲಿ.


ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ ಕಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ಇರುಳಲ್ಲಿ ಬೆಂಕಿಯಲ್ಲೂ ಹಗಲಲ್ಲಿ ಮೇಘದಲ್ಲೂ ನಿಮ್ಮ ಮುಂದುಗಡೆ ಹೋದ ದೇವರನ್ನು ನೀವು ನಂಬಲಿಲ್ಲ.


ಇಸ್ರಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲುಹೊತ್ತಿನಲ್ಲಿ ಸರ್ವೇಶ್ವರನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.


ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು