Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:20 - ಕನ್ನಡ ಸತ್ಯವೇದವು C.L. Bible (BSI)

20 ಒಂದೊಂದು ವೇಳೆ ಆ ಮೇಘ ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಸರ್ವೇಶ್ವರನ ಆಜ್ಞಾನುಸಾರ ಅವರು ಹಾಗೆಯೇ ಇಳಿದುಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞಾನುಸಾರವಾಗಿಯೇ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿನಗಳು ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳಿದುಕೊಳ್ಳುತ್ತಿದ್ದರು. ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುವದು. ಯೆಹೋವನ ಆಜ್ಞಾನುಸಾರವಾಗಿ ಅವರು ಇಳುಕೊಳ್ಳುತ್ತಿದ್ದರು, ಯೆಹೋವನ ಆಜ್ಞಾನುಸಾರವಾಗಿ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಒಂದೊಂದು ವೇಳೆಯಲ್ಲಿ ಮೇಘವು ಕೆಲವು ದಿವಸ ಮಾತ್ರ ಪವಿತ್ರ ಗುಡಾರದ ಮೇಲೆ ನಿಂತಿರುವುದು. ಯೆಹೋವನ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಿದ್ದರು ಮತ್ತು ಯೆಹೋವನ ಆಜ್ಞೆಯ ಪ್ರಕಾರ ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ, ಅವರು ಯೆಹೋವ ದೇವರ ಆಜ್ಞೆಯ ಪ್ರಕಾರ ಇಳಿದುಕೊಳ್ಳುತ್ತಿದ್ದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:20
8 ತಿಳಿವುಗಳ ಹೋಲಿಕೆ  

ಅದು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುತ್ತಿದ್ದ ಸಂದರ್ಭದಲ್ಲಿ ಇಸ್ರಯೇಲರು ಸರ್ವೇಶ್ವರನ ಸೂಚನೆಯನ್ನು ಅನುಸರಿಸಿ ಪ್ರಯಾಣಮಾಡದೆ ಇರುತ್ತಿದ್ದರು.


ಕೆಲವೊಮ್ಮೆ ಆ ಮೇಘ ಸಾಯಂಕಾಲದಿಂದ ಹೊತ್ತಾರೆಯವರೆಗೆ ಇರುತ್ತಿತ್ತು. ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣ ಮಾಡುತ್ತಿದ್ದರು. ಕೆಲವು ಸಲ ಅದು ಹಗಲಿರುಳೂ ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು.


ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II


ನಿನ್ನ ಸ್ವಂತ ಬುದ್ಧಿಯನ್ನೇ ನೆಚ್ಚಿಕೊಂಡಿರದಿರು; ಪೂರ್ಣ ಮನಸ್ಸಿನಿಂದ ಸರ್ವೇಶ್ವರನಲ್ಲಿ ನಂಬಿಕೆಯಿಡು.


ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.


ಸರ್ವೇಶ್ವರನ ಅಪ್ಪಣೆಯನ್ನು ಹೊಂದಿಯೇ ಅವರು ಪ್ರಯಾಣ ಮಾಡುತ್ತಿದ್ದರು. ಸರ್ವೇಶ್ವರನ ಅಪ್ಪಣೆಯನ್ನು ಪಡೆದು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.


ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ ಕ್ರಮಾನುಸಾರ ದಂಡುಗಳು ಪ್ರಯಾಣಮಾಡಿದ್ದು ಇದೇ ಮೊದಲನಯ ಸಾರಿ.


ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು