ಅರಣ್ಯಕಾಂಡ 9:22 - ಕನ್ನಡ ಸತ್ಯವೇದವು C.L. Bible (BSI)22 ದೇವದರ್ಶನದ ಗುಡಾರದ ಮೇಲೆ ಆ ಮೇಘ ನಿಲ್ಲುವುದು ಎರಡು ದಿನವಾದರೂ ತಿಂಗಳಾದರೂ ಒಂದು ವರ್ಷವಾದರೂ ಸರಿಯೇ ಅಲ್ಲಿಯತನಕ ಇಸ್ರಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಅದು ಮೇಲೆದ್ದಾಗ ಅವರು ಹೊರಡುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವುದು ಎರಡು ದಿನವಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಅಲ್ಲಿಯ ತನಕ ಇಸ್ರಾಯೇಲರು ಪ್ರಯಾಣಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಮೇಘವು ಏಳುವಾಗ ಅವರು ಹೊರಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆ ಮೇಘವು ದೇವದರ್ಶನದ ಗುಡಾರದ ಮೇಲೆ ನಿಂತಿರುವದು ಎರಡು ದಿನವಾದರೂ ಒಂದು ತಿಂಗಳಾದರೂ ಒಂದು ವರುಷವಾದರೂ ಸರಿಯೇ, ಆ ಪರ್ಯಂತರವೂ ಇಸ್ರಾಯೇಲ್ಯರು ಪ್ರಯಾಣಮಾಡದೆ ಇಳುಕೊಂಡೇ ಇರುವರು; ಅದು ಎದ್ದಾಗ ಅವರು ಹೊರಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆ ಮೇಘವು ಪವಿತ್ರಗುಡಾರದ ಮೇಲೆ ಎರಡು ದಿನವಾಗಲಿ ಒಂದು ತಿಂಗಳಾಗಲಿ ಒಂದು ವರ್ಷವಾಗಲಿ ನಿಂತರೆ ಅದು ನಿಂತಿರುವ ತನಕ ಇಸ್ರೇಲರು ಪ್ರಯಾಣ ಮಾಡದೆ ಇಳಿದುಕೊಂಡೇ ಇರುವರು. ಅದು ಮೇಲಕ್ಕೆ ಎದ್ದಾಗ ಅವರು ಹೊರಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |