ಅರಣ್ಯಕಾಂಡ 9:23 - ಕನ್ನಡ ಸತ್ಯವೇದವು C.L. Bible (BSI)23 ಸರ್ವೇಶ್ವರನ ಆಜ್ಞೆಯ ಪ್ರಕಾರ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞೆಯ ಪ್ರಕಾರವೇ ಡೇರೆಗಳನ್ನು ಕಿತ್ತು ಹೊರಡುತ್ತಿದ್ದರು. ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ಸರ್ವೇಶ್ವರನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಯೆಹೋವನ ಆಜ್ಞೆಯ ಪ್ರಕಾರ ಅವರು ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಯೆಹೋವನ ಆಜ್ಞೆಯ ಪ್ರಕಾರವೇ ಅವರು ಡೇರೆಗಳನ್ನು ತೆಗೆದುಕೊಂಡು ಹೊರಡುತ್ತಿದ್ದರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯೆಹೋವನ ಆಜ್ಞೆಯ ಪ್ರಕಾರ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುವರು, ಯೆಹೋವನ ಆಜ್ಞೆಯ ಪ್ರಕಾರ ಡೇರೆಗಳನ್ನು ಕಿತ್ತು ಹೊರಡುವರು. ಯೆಹೋವನು ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆಯೇ ಅವರು ಯೆಹೋವನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಹೀಗೆ ಯೆಹೋವನ ಸೂಚನೆಯಂತೆ ಜನರು ಪಾಳೆಯ ಮಾಡಿಕೊಳ್ಳುವರು; ಪ್ರಯಾಣ ಮುಂದುವರಿಸುವರು. ಮೋಶೆಯ ಮೂಲಕವಾಗಿ ಆಜ್ಞಾಪಿಸಿದಂತೆ ಜನರು ಯೆಹೋವನ ಸೂಚನೆಗಳನ್ನು ಲಕ್ಷ್ಯವಿಟ್ಟು ಅನುಸರಿಸಿ ನಡೆಯುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಯೆಹೋವ ದೇವರ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಾ, ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಯೆಹೋವ ದೇವರ ಅಪ್ಪಣೆಯನ್ನು ಕೈಗೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿ |