Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:5 - ಕನ್ನಡ ಸತ್ಯವೇದವು C.L. Bible (BSI)

5 ಅವರು ಅದಕ್ಕನುಗುಣವಾಗಿ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಾಸ್ಕವನ್ನು ಆಚರಿಸಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಾಗೆಯೇ ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಪಸ್ಕಹಬ್ಬವನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಎಲ್ಲವನ್ನು ಇಸ್ರಾಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಸೀನಾಯಿ ಅರಣ್ಯದಲ್ಲಿ ಅದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಜನರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ನಸುಸಂಜೆಯ ವೇಳೆಯಲ್ಲಿ ಸೀನಾಯಿ ಮರುಭೂಮಿಯಲ್ಲಿ ಇದನ್ನು ಆಚರಿಸಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಪ್ರತಿಯೊಂದನ್ನೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಸ್ಕವನ್ನು ಆಚರಿಸಿದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ, ಇಸ್ರಾಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:5
18 ತಿಳಿವುಗಳ ಹೋಲಿಕೆ  

ಇಸ್ರಯೇಲರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಜೆರಿಕೋವಿನ ಬಯಲಿನಲ್ಲಿ ಪಾಸ್ಕಹಬ್ಬವನ್ನಾಚರಿಸಿದರು.


ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


“ಇಂತಿರಲು, ಅಗ್ರಿಪ್ಪ ರಾಜರೇ, ನನಗೆ ಲಭಿಸಿದ ಈ ಸ್ವರ್ಗೀಯ ದರ್ಶನಕ್ಕೆ ಅವಿಧೇಯನಾಗಿ ನಡೆಯಲು ನನ್ನಿಂದಾಗಲಿಲ್ಲ.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಮೋಶೆ ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನನ್ನು ಮತ್ತು ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸ ಓಗನನ್ನು ಜಯಿಸಿದನು. ತರುವಾಯ,


ಸರ್ವೇಶ್ವರಸ್ವಾಮಿ ಕೊಟ್ಟ ಈ ಎಲ್ಲ ಆಜ್ಞೆಗಳನ್ನು ಮೋಶೆ ಇಸ್ರಯೇಲರಿಗೆ ತಿಳಿಸಿದನು.


ಸರ್ವೇಶ್ವರ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನನು ಹಾಗು ಇಸ್ರಯೇಲ್ ಜನರೆಲ್ಲರು ಮಾಡಿದರು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಇಸ್ರಯೇಲರು ಆ ಕೆಲಸವನ್ನೆಲ್ಲಾ ಮಾಡಿದ್ದರು.


ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಅದನ್ನು ಮಾಡಿದ್ದರು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.


ನೋಹನು ಹಾಗೆಯೇ ಮಾಡಿದನು. ದೇವರ ಆಜ್ಞಾನುಸಾರ ನಡೆದುಕೊಂಡನು.


ಅಂತೆಯೇ ಮೋಶೆ ಇಸ್ರಯೇಲರಿಗೆ, “ನೀವು ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಲಾಗಿದೆ,” ಎಂದು ತಿಳಿಸಿದನು.


ಮೋಶೆ ಮತ್ತು ಆರೋನರಿಗೆ ಸರ್ವೇಶ್ವರ ಆಜ್ಞಾಪಿಸಿದ ಮೇರೆಗೆ ಇಸ್ರಯೇಲರೆಲ್ಲರೂ ನಡೆದುಕೊಂಡರು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಡೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು