Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:7 - ಕನ್ನಡ ಸತ್ಯವೇದವು C.L. Bible (BSI)

7 “ನರಶವದ ಸೋಂಕಿನಿಂದ ನಾವು ಅಶುದ್ಧರಾದೆವು. ನಿಯಮಿತ ಕಾಲದಲ್ಲಿ ಮಿಕ್ಕ ಇಸ್ರಯೇಲರೊಡನೆ ಸರ್ವೇಶ್ವರನಿಗೆ ಬಲಿಯನ್ನು ಸಮರ್ಪಿಸಲು ನಮಗೆ ಅಪ್ಪಣೆಯಿಲ್ಲವೆ?” ಎಂದು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಈ ಜನರು ಮೋಶೆಗೆ “ಮನುಷ್ಯನ ಶವಸೋಂಕಿದರಿಂದ ನಾವು ಅಶುದ್ಧರಾದೆವು. ನಾವು ಉಳಿದ ಇಸ್ರಾಯೇಲರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವುದಕ್ಕೆ ಅಪ್ಪಣೆಯಿಲ್ಲವೋ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮನುಷ್ಯ ಶವ ಸೋಂಕಿದದರಿಂದ ನಾವು ಅಶುದ್ಧರಾದೆವು. ನಾವು ವಿುಕ್ಕ ಇಸ್ರಾಯೇಲ್ಯರೊಡನೆ ನೇಮಕವಾದ ಕಾಲದಲ್ಲಿ ಯೆಹೋವನಿಗೆ ಯಜ್ಞವನ್ನು ಸಮರ್ಪಿಸುವದಕ್ಕೆ ಅಪ್ಪಣೆಯಿಲ್ಲವೋ ಎಂದು ಕೇಳಲು ಮೋಶೆ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ನಾವು ಮನುಷ್ಯ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದೇವೆ. ಆದರೆ ನೇಮಕವಾದ ಕಾಲದಲ್ಲಿ ಯೆಹೋವನ ಪಸ್ಕಹಬ್ಬದ ಯಜ್ಞವನ್ನು ಇತರ ಇಸ್ರೇಲರೊಡನೆ ಅರ್ಪಿಸುವುದಕ್ಕೆ ಸಾಧ್ಯವಿಲ್ಲವೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೋಶೆಯ ಸಂಗಡ ಮಾತನಾಡಿ, “ನಾವು ಮನುಷ್ಯನ ಶವದ ಸೋಂಕಿನಿಂದ ಅಶುದ್ಧರಾಗಿದ್ದೇವೆ. ಆದ್ದರಿಂದ ನಾವು ಇಸ್ರಾಯೇಲರೊಡನೆ ನೇಮಕವಾದ ಸಮಯದಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಲು ನಮಗೆ ಏಕೆ ಅಡ್ಡಿಯಾಗಬೇಕು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:7
7 ತಿಳಿವುಗಳ ಹೋಲಿಕೆ  

ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು.


ಅವರು ಹೇಳಿದ್ದು ಇದು: “ಇಸ್ರಯೇಲರು ಪಾಸ್ಕ ಹಬ್ಬವನ್ನು ನಿಯಮಿತ ಕಾಲದಲ್ಲಿ ಆಚರಿಸುವಂತೆ ಹೇಳು.


‘ಸರ್ವೇಶ್ವರ ಸ್ವಾಮಿ ಈಜಿಪ್ಟಿನವರನ್ನು ಸಂಹರಿಸಿದಾಗ ಆ ದೇಶದಲ್ಲೇ ಇದ್ದ ಇಸ್ರಯೇಲರ ಮನೆಗಳನ್ನು ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದರು. ಆದ್ದರಿಂದ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಈ ಪಾಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ’ ಎಂದು ಉತ್ತರಕೊಡಿ,” ಎಂದು ಹೇಳಿದನು. ...


ಆದರೆ ಕೆಲವರು ನರಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದರು. ಆದ್ದರಿಂದ ಪಾಸ್ಕಹಬ್ಬವನ್ನು ನಿಯಮಿತ ದಿನದಂದು ಆಚರಿಸಲಾಗಲಿಲ್ಲ. ಅವರು ಮೋಶೆ - ಆರೋನರ ಬಳಿಗೆ ಬಂದು,


ಅವರಿಗೆ ಮೋಶೆ, “ಸ್ವಲ್ಪ ತಾಳಿ, ಸರ್ವೇಶ್ವರ ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ಎಂದು ವಿಚಾರಿಸುತ್ತೇನೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು