Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 9:8 - ಕನ್ನಡ ಸತ್ಯವೇದವು C.L. Bible (BSI)

8 ಅವರಿಗೆ ಮೋಶೆ, “ಸ್ವಲ್ಪ ತಾಳಿ, ಸರ್ವೇಶ್ವರ ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ಎಂದು ವಿಚಾರಿಸುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ಮೋಶೆ ಅವರಿಗೆ, “ಸ್ವಲ್ಪ ಕಾದುಕೊಂಡಿರಿ. ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸ್ವಲ್ಪ ಕಾದು ಕೊಂಡಿರ್ರಿ; ನಿಮ್ಮ ವಿಷಯದಲ್ಲಿ ಯೆಹೋವನು ಏನು ಅಪ್ಪಣೆಮಾಡುವನೋ ನಾನು ವಿಚಾರಿಸುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮೋಶೆಯು ಅವರಿಗೆ, “ಇಲ್ಲೇ ಇರಿ. ಇದರ ವಿಷಯದಲ್ಲಿ ಯೆಹೋವನು ಏನು ಹೇಳುತ್ತಾನೆಂದು ನಾನು ಆತನನ್ನು ವಿಚಾರಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮೋಶೆ ಅವರಿಗೆ, “ಸ್ವಲ್ಪ ಕಾಯಿರಿ, ಯೆಹೋವ ದೇವರು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ನಾನು ಕೇಳುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 9:8
19 ತಿಳಿವುಗಳ ಹೋಲಿಕೆ  

ನಾ ಕೇಳುತ್ತಿರುವೆನು, ಪ್ರಭು ಹೇಳುವುದನು I ತನ್ನ ಜನರಿಗಾತ ನುಡಿವುದು ಶಾಂತಿಯನು I ಇನ್ನಾದರು ತೊರೆಯೋಣ ಮೂರ್ಖತೆಯನು II


ಮೋಶೆ ಅವರ ವಿಜ್ಞಾಪನೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ವಿಚಾರಿಸಿದನು. ಅವರು ಆತನಿಗೆ ಹೀಗೆಂದು ವಿಧಿಸಿದರು:


ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.


ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.


ಅದಕ್ಕೆ ಮೋಶೆ, “ದೇವರ ತೀರ್ಪನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ;


“ನರಶವದ ಸೋಂಕಿನಿಂದ ನಾವು ಅಶುದ್ಧರಾದೆವು. ನಿಯಮಿತ ಕಾಲದಲ್ಲಿ ಮಿಕ್ಕ ಇಸ್ರಯೇಲರೊಡನೆ ಸರ್ವೇಶ್ವರನಿಗೆ ಬಲಿಯನ್ನು ಸಮರ್ಪಿಸಲು ನಮಗೆ ಅಪ್ಪಣೆಯಿಲ್ಲವೆ?” ಎಂದು ವಿಚಾರಿಸಿದರು.


ಆಗ ಸರ್ವೇಶ್ವರ ಮೋಶೆಗೆ ಹೀಗೆಂದರು:


ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ಇದುವರೆಗೂ ಯಾವ ನಿಯಮವೂ ಇರಲಿಲ್ಲ. ಆದುದರಿಂದ ಅವನನ್ನು ಕಾವಲಿನಲ್ಲಿಟ್ಟರು.


ಅವನ ವಿಷಯವಾಗಿ ಸರ್ವೇಶ್ವರನ ತೀರ್ಪನ್ನು ತಿಳಿದುಕೊಳ್ಳುವಷ್ಟು ಕಾಲ ಅವನನ್ನು ಕಾವಲಲ್ಲಿ ಇರಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು