Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:1 - ಕನ್ನಡ ಸತ್ಯವೇದವು C.L. Bible (BSI)

1 ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದಿಯಲ್ಲಿ ದೇವರು ಆಕಾಶವನ್ನೂ ಭೂವಿುಯನ್ನೂ ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:1
67 ತಿಳಿವುಗಳ ಹೋಲಿಕೆ  

ವಿಶ್ವವು ದೇವರ ವಾಣಿಯಿಂದ ಉಂಟಾಯಿತು ಎಂಬುದನ್ನು ಮತ್ತು ಗೋಚರವಾದವುಗಳು ಅಗೋಚರವಾದವುಗಳಿಂದ ಉಂಟಾದವು ಎಂಬುದನ್ನು ವಿಶ್ವಾಸದಿಂದಲೇ ತಿಳಿಯುತ್ತೇವೆ.


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.


ಇದಲ್ಲದೆ, “ಸರ್ವೇಶ್ವರಾ, ಆದಿಯಲ್ಲಿ ನೀ ಭೂಮಿಯನು ಸೃಜಿಸಿದೆ ನಭಮಂಡಲದಲ್ಲಿ ನಿನ್ನ ಕೈಚಳಕವ ತೋರಿದೆ.


ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು :


ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.


ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನೆಲ್ಲಿದ್ದೆ? ಉತ್ತರಕೊಡು, ನೀನು ಅಷ್ಟು ಜ್ಞಾನಿಯಾಗಿದ್ದರೆ.


ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ.


ಆದರೆ, ಅವರು ಒಂದು ವಿಷಯವನ್ನು ಉದ್ದೇಶಪೂರ್ವಕವಾಗಿ ಮರೆತುಬಿಡುತ್ತಾರೆ. ಅದೇನೆಂದರೆ, ಪ್ರಾರಂಭದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದಿಂದಲೇ ಉಂಟಾದವು. ಜಲದಿಂದ, ಜಲದ ಮೂಲಕ ಭೂಮಿ ಉಂಟಾಯಿತು.


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.


ಆತ ಭೂಮಿಯನ್ನು ನಿರ್ಮಿಸಿದ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ ವಿವೇಕದಿಂದ.


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಸರ್ವೇಶ್ವರಸ್ವಾಮಿ ಜ್ಞಾನದ ಮೂಲಕ ಜಗವನ್ನು ಸ್ಥಾಪಿಸಿದ ವಿವೇಕದ ಮುಖಾಂತರ ಗಗನವನ್ನು ಸ್ಥಿರಗೊಳಿಸಿದ.


ಆತನು ಮಹಾಶಬ್ದದಿಂದ, “ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ; ಅವರಿಗೆ ಸ್ತುತಿಸ್ತೋತ್ರ ಸಲ್ಲಿಸಿರಿ. ಏಕೆಂದರೆ, ಅವರು ತೀರ್ಪುಕೊಡುವ ಗಳಿಗೆಯು ಬಂದಿದೆ. ಆದ್ದರಿಂದ ಭೂಸ್ವರ್ಗಗಳನ್ನೂ ಕಡಲುಕಾರಂಜಿಗಳನ್ನೂ ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸಿರಿ,” ಎಂದು ಹೇಳಿದನು.


ಇಹಪರಗಳನು ಉಂಟುಮಾಡಿದ ಪ್ರಭುವಿಂದ I ಲಭಿಸುವಂತಾಗಲಿ ನಿಮಗೆ ಆಶೀರ್ವಾದ II


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ಜ್ಞಾನದಿಂದ ಜಗವನು ನಿರ್ಮಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II


ಆದಿಯಲೆ ನೀ ಭುವಿಗೆ ಅಸ್ತಿವಾರ ಹಾಕಿದೆ I ಗಗನಮಂಡಲವು ಸಹ ನಿನ್ನ ಸೃಷ್ಟಿಯಾಗಿದೆ II


ಪ್ರತಿಯೊಂದು ಮನೆಗೂ ಕಟ್ಟಿದವನೊಬ್ಬನು ಇರುತ್ತಾನೆ; ಸಮಸ್ತವನ್ನು ಕಟ್ಟಿದವರಾದರೋ ದೇವರೇ.


ನಮಗುದ್ಧಾರ ಪ್ರಭುವಿನ ನಾಮದಲಿ I ಭೂಮ್ಯಾಕಾಶವನು ಸೃಜಿಸಿದಾತನಲಿ II


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.


ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ನನಗೆ ಒತ್ತಾಸೆ ಪ್ರಭುವಿನಿಂದ I ಭೂಮ್ಯಾಕಾಶ ಸೃಜಿಸಿದವನಿಂದ II


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ I ಪ್ರಭುವಿನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ II


ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು : “ಇನ್ನು ನಿಧಾನಿಸುವಂತಿಲ್ಲ;


ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.


ಈ ಸಮಾಚಾರವನ್ನು ಕೇಳಿದಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ.


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.”


“ಇಸ್ರಯೇಲಿನ ದೇವರೇ, ಸೇನಾಧೀಶ್ವರ ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೆ I ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೆ II


ಹರಸಲಿ ಸಿಯೋನಿನಿಂದ ನಿಮ್ಮನು I ಭೂಮ್ಯಾಕಾಶಗಳ ಸೃಜಿಸಿದಾತನು II


‘ಅ'ಕಾರವೂ ‘ಳ'ಕಾರವೂ ನಾನೇ ಆದಿಯೂ ಸಮಾಪ್ತಿಯೂ ನಾನೇ'. “


ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.


ಆಗ ಬರಲಿರುವ ಸಂಕಷ್ಟಗಳು ದೈವಸೃಷ್ಟಿಯ ಆದಿಯಿಂದ ಇರಲಿಲ್ಲ. ಇನ್ನು ಮುಂದಕ್ಕೂ ಇರುವುದಿಲ್ಲ.


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


ನೀ ಉಸಿರನ್ನೂದಲು ಹೊಸದಾಗುವುವು I ಪುನಶ್ಚೇತನಗೊಳ್ಳುವುದು ಜಗವೆಲ್ಲವು II


ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ I ಸರ್ವೇಶ್ವರನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ II


ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ : ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.


ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು.


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ಆತನ ಶ್ವಾಸ ಶುಭ್ರವಾಗಿಸುತ್ತದೆ ಆಕಾಶಮಂಡಲವನು ಆತನ ಹಸ್ತ ಇರಿಯುತ್ತದೆ ಹರಿದೋಡುವ ಸರ್ಪವನು.


ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.


ಆಕಾಶಮಂಡಲವನ್ನು ಹರಡಿದವನು ದೇವರೇ ಕಡಲಿನ ತರಂಗಗಳನ್ನು ಮೆಟ್ಟಿದವನು ಆತನೊಬ್ಬನೇ.


ನಿಮಗೆ ತಿಳಿದಿಲ್ಲವೋ, ನೀವು ಕೇಳಿಲ್ಲವೋ ಆದಿಯಿಂದ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಪೃಥ್ವಿಸ್ಥಾಪನೆ ಹೇಗಾಯಿತೆಂದು ನೀವು ಗ್ರಹಿಸಿಲ್ಲವೋ?


“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.


ಟೈರಿನ ಅರಸ ಹೂರಾಮನು ಪತ್ರದ ಮೂಲಕ ಸೊಲೊಮೋನನಿಗೆ, “ಸರ್ವೇಶ್ವರ ತಮ್ಮ ಪ್ರಜೆಗಳನ್ನು ಪ್ರೀತಿಸುವವರು. ಆದುದರಿಂದ ನಿನ್ನನ್ನು ಆ ಜನರ ಅರಸನನ್ನಾಗಿ ನೇಮಿಸಿದ್ದಾರೆ.


ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I ಏತರದವನು ನರಮಾನವನು ನೀನವನನು ಪರಾಮರಿಸಲು? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು