Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:10 - ಕನ್ನಡ ಸತ್ಯವೇದವು C.L. Bible (BSI)

10 ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರು ಒಣನೆಲಕ್ಕೆ ಭೂವಿುಯೆಂದೂ ಜಲಸಮೂಹಕ್ಕೆ ಸಮುದ್ರವೆಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೇದೆಂದು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ಒಣನೆಲಕ್ಕೆ ಭೂಮಿಯೆಂದೂ ಒಟ್ಟಿಗೆ ಸೇರಿಕೊಂಡಿದ್ದ ನೀರಿಗೆ ಸಮುದ್ರವೆಂದೂ ಹೆಸರಿಟ್ಟನು. ದೇವರಿಗೆ ಇವು ಒಳ್ಳೆಯದಾಗಿ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರು ಒಣ ನೆಲಕ್ಕೆ “ಭೂಮಿ” ಎಂದೂ ಕೂಡಿಕೊಂಡಿದ್ದ ನೀರಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರು ಅದನ್ನು ಒಳ್ಳೆಯದೆಂದು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:10
7 ತಿಳಿವುಗಳ ಹೋಲಿಕೆ  

“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಸ್ವಾಮಿದೇವನ ಮಹಿಮೆಯಿರಲಿ ಶಾಶ್ವತವಾಗಿ I ಆತ ಸಂತೋಷಿಸಲಿ ತನ್ನ ಸುಕೃತ್ಯಗಳಿಗಾಗಿ II


ದೇವರ ಕಣ್ಣಿಗೆ ಅದು ಚೆನ್ನಾಗಿ ಕಂಡಿತು. ಅವರು ಬೆಳಕನ್ನೂ ಕತ್ತಲೆಯನ್ನೂ ಬೇರೆಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟರು.


ತುಂಬಿಟ್ಟಿಹನು ಜಲರಾಶಿಗಳನು ಕಡಲೆಂಬ ಕುಡಿಕೆಯಲಿ I ಕೂಡಿಟ್ಟಿಹನು ಜಲಾಶಯಗಳನು ಬುವಿಯುಗ್ರಾಣದಲಿ II


ಸಮುದ್ರವು ಆತನದೆ-ಅದ ನಿರ್ಮಿಸಿದವ ಆತನೆ I ಒಣನೆಲವು ಆತನದೆ-ಅದ ರೂಪಿಸಿದವ ಆತನೆ II


ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೆ I ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೆ II


ಅದಕ್ಕೆ ಯೋನನು: “ನಾನು ಹಿಬ್ರಿಯನು. ಸಮುದ್ರವನ್ನೂ ಭೂಮಿಯನ್ನೂ ಸೃಷ್ಟಿಸಿದ ಪರಲೋಕ ದೇವರಾದ ಸರ್ವೇಶ್ವರನ ಭಕ್ತನು ನಾನು,” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು