ಆದಿಕಾಂಡ 1:11 - ಕನ್ನಡ ಸತ್ಯವೇದವು C.L. Bible (BSI)11 ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತರುವಾಯ ದೇವರು - ಭೂವಿುಯು ಹುಲ್ಲನ್ನೂ ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಸಲಿ; ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನೂ ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ ಎಂದು ಹೇಳಿದನು; ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಳಿಕ ದೇವರು, “ಭೂಮಿಯು ಸಸ್ಯರಾಶಿಯನ್ನು ಬೆಳೆಸಲಿ; ಬೀಜಗಳನ್ನು ಫಲಿಸುವ ಸಸ್ಯಗಳು ಬೆಳೆಯಲಿ; ತನ್ನತನ್ನ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣುಗಳನ್ನು ಫಲಿಸುವ ಹಣ್ಣಿನ ಮರಗಳು ಭೂಮಿಯ ಮೇಲೆ ಬೆಳೆಯಲಿ” ಅಂದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅನಂತರ ದೇವರು, “ಭೂಮಿಯು ಹುಲ್ಲನ್ನೂ ಬೀಜಬಿಡುವ ಗಿಡಗಳನ್ನೂ ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನೂ ಉತ್ಪತ್ತಿ ಮಾಡಲಿ,” ಎಂದು ಹೇಳಿದರು. ಅದು ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿ |