Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:16 - ಕನ್ನಡ ಸತ್ಯವೇದವು C.L. Bible (BSI)

16 ಹಗಲನ್ನಾಳುವುದಕ್ಕೆ ಸೂರ್ಯನನ್ನೂ ಇರುಳನ್ನಾಳುವುದಕ್ಕೆ ಚಂದ್ರನನ್ನೂ, ಹೀಗೆ ಎರಡು ದೀವಿಗೆಗಳನ್ನು ಸೃಷ್ಟಿ ಮಾಡಿದರು. ಅದು ಮಾತ್ರವಲ್ಲ, ನಕ್ಷತ್ರಗಳನ್ನೂ ಅವರು ಸೃಷ್ಟಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೇವರು ಹಗಲನ್ನಾಳುವದಕ್ಕೆ ದೊಡ್ಡ ಬೆಳಕನ್ನೂ ಇರುಳನ್ನಾಳುವದಕ್ಕೆ ಚಿಕ್ಕ ಬೆಳಕನ್ನೂ, ಈ ಎರಡು ದೊಡ್ಡ ಬೆಳಕುಗಳನ್ನು ಉಂಟುಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ದೇವರು ಎರಡು ದೊಡ್ಡಬೆಳಕುಗಳನ್ನು ಸೃಷ್ಟಿಸಿದನು. ಹಗಲನ್ನಾಳುವುದಕ್ಕಾಗಿ ದೊಡ್ಡಬೆಳಕನ್ನೂ ರಾತ್ರಿಯನ್ನಾಳುವುದಕ್ಕಾಗಿ ಅದಕ್ಕಿಂತ ಚಿಕ್ಕಬೆಳಕನ್ನೂ ಸೃಷ್ಟಿಸಿದನು. ಆತನು ನಕ್ಷತ್ರಗಳನ್ನು ಸಹ ಸೃಷ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಹಗಲನ್ನಾಳುವುದಕ್ಕೆ ದೊಡ್ಡ ಬೆಳಕನ್ನು, ರಾತ್ರಿಯನ್ನಾಳುವುದಕ್ಕೆ ಚಿಕ್ಕ ಬೆಳಕನ್ನು ಎಂಬಂತೆ ದೇವರು ಎರಡು ದೊಡ್ಡ ಬೆಳಕುಗಳನ್ನು ಉಂಟುಮಾಡಿದರು. ದೇವರು ನಕ್ಷತ್ರಗಳನ್ನು ಸಹ ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:16
22 ತಿಳಿವುಗಳ ಹೋಲಿಕೆ  

ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II


ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ


ಹೊಗಳಲಿ ಪ್ರಭುವಿನ ನಾಮವನು ಇವೆಲ್ಲ I ಆತನ ಅಪ್ಪಣೆಗೆ ಉಂಟಾದವುಗಳೆಲ್ಲ II


ಹಗಲಿರುಳುಗಳಿಗೆ ನಿಯಾಮಕ ನೀನು I ರವಿತಾರೆಗಳ ನಿರ್ಮಾಪಕ ನೀನು II


ಸೂರ್ಯಚಂದ್ರರೇ, ಹೊಗಳಿ ಆತನನು I ಮಿನುಗುವ ತಾರೆಗಳೇ, ಹೊಗಳಿ ಆತನನು II


ಭೂಮಿಗೆ ಮೂಲೆಗಲ್ಲನು ಹಾಕಿದವನಾರು? ಅದರ ಅಡಿಗಲ್ಲು ಯಾವುದರ ಮೇಲೆ ನಿಂತಿದೆ?”


ಸೂರ್ಯನ ಪ್ರಕಾಶ ಒಂದಾದರೆ, ಚಂದ್ರನ ಪ್ರಕಾಶವೇ ಇನ್ನೊಂದು; ನಕ್ಷತ್ರದ ಪ್ರಕಾಶವೇ ಬೇರೊಂದು. ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಹಾರಿ ಓಡುವ ನಿನ್ನ ಬಾಣಗಳ ಬೆಳಕಿಗೆ ಥಳಥಳಿಸುವ ನಿನ್ನ ಈಟಿಯ ಹೊಳಪಿಗೆ ಸೂರ್ಯಚಂದ್ರ ಅಡಗುತ್ತವೆ ಗೂಡಿನೊಳಗೆ.


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


ಏರುತಿಹನು ದಿಗಂತದೊಂದು ಕೊನೆಯಿಂದ ಮತ್ತೊಂದು ಕೊನೆಗೆ I ಮುಚ್ಚುಮರೆಯಾದುದೊಂದೂ ಇರದು, ಆತನಾ ಉರಿಗಣ್ಣಿಗೆ II


ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ಪ್ರಕಾಶಮಯ ಸೂರ್ಯನನು ನೋಡಿ ಕಾಂತಿಯುತ ಚಂದ್ರನ ಚಲನೆಯನು ದಿಟ್ಟಿಸಿ,


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಭೂಮಿಗೆ ಬೆಳಕನ್ನೀಯಲು, ಆಕಾಶ ದೀಪಗಳು ಉಂಟಾಗಲಿ,” ಎಂದರು. ಹಾಗೆಯೇ ಆಯಿತು.


ಸರ್ವೇಶ್ವರನು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದಾತ. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದಾತ. ಅಲೆಗಳು ಭೋರ್ಗರೆವಷ್ಟು ಸಮುದ್ರವನ್ನು ಕೆರಳಿಸುವಾತ ‘ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮಧೇಯದಿಂದ ಪ್ರಸಿದ್ಧನಾತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು