Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:2 - ಕನ್ನಡ ಸತ್ಯವೇದವು C.L. Bible (BSI)

2 ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಭೂವಿುಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು; ಆದಿಸಾಗರದ ಮೇಲೆ ಕತ್ತಲಿತ್ತು; ದೇವರಾತ್ಮವು ಜಲಸಮೂಹಗಳ ಮೇಲೆ ಚಲಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಭೂಮಿಯು ಅಸ್ತವ್ಯಸ್ತವಾಗಿಯೂ ಬರಿದಾಗಿಯೂ ಇತ್ತು. ಭೂಮಿಯ ಮೇಲೆ ಏನೂ ಇರಲಿಲ್ಲ. ಸಾಗರದ ಮೇಲೆ ಕತ್ತಲು ಕವಿದಿತ್ತು. ದೇವರಾತ್ಮನು ಜಲಸಮೂಹಗಳ ಮೇಲೆ ಚಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಭೂಮಿಯು ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲೆ ಕವಿದಿತ್ತು. ದೇವರಾತ್ಮರು ಜಲ ಸಮೂಹಗಳ ಮೇಲೆ ಚಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:2
17 ತಿಳಿವುಗಳ ಹೋಲಿಕೆ  

ನಾನು ಭೂಮಿಯನ್ನು ನೋಡಿದೆ, ಅದು ಬಿಕೋ ಎನ್ನುತ್ತಿತ್ತು. ಆಕಾಶವನ್ನು ದಿಟ್ಟಿಸಿದೆ, ಅದರಲ್ಲಿ ಬೆಳಕೇ ಇರಲಿಲ್ಲ.


ನೀ ಉಸಿರನ್ನೂದಲು ಹೊಸದಾಗುವುವು I ಪುನಶ್ಚೇತನಗೊಳ್ಳುವುದು ಜಗವೆಲ್ಲವು II


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ಉತ್ತರ ದಿಕ್ಕನ್ನು ವಿಸ್ತರಿಸಿಹನು ಶೂನ್ಯದ ಮೇಲೆ ಭೂಮಂಡಲವನ್ನು ತೂಗುಹಾಕಿಹನು ಏನೂ ಇಲ್ಲದರ ಮೇಲೆ.


ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”


ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಗೂಡಿನಿಂದ ಮರಿಗಳನು ಹೊರಡಿಸಿದಾ ಗರುಡಪಕ್ಷಿ ಹಾರಾಡಿ ಅವು ಬೀಳದಂತೆ ಕಾಯುತ್ತದೆ ರೆಕ್ಕೆಗಳನು ಚಾಚಿ. ಅಂತೆಯೆ ಸರ್ವೇಶ್ವರ ಕಾಪಾಡಿದ ಇಸ್ರಯೇಲರನು ಕೈಚಾಚಿ.


ಅದಕ್ಕೆ ಮೋಡಗಳನು ತೊಡಿಸಿ, ಕಾರ್ಗತ್ತಲನು ಉಡಿಸಿದವನು ಯಾರು?


ಅದಕ್ಕೆ ಹೊದಿಸಿರುವೆ ಸಾಗರವೆಂಬ ವಸ್ತ್ರವನು I ಆ ಜಲರಾಶಿಗಳು ಮುಳುಗಿಸಿವೆ ಬೆಟ್ಟಗಳನು II


ಜಲರಾಶಿಯ ಮೇಲೆ ಭೂಮಿಯನು ಹಾಸಿದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ತಿಮಿಂಗಲಗಳೂ ಆದಿಸಾಗರಗಳೂ I ಹೊಗಳಲಿ ಭೂಮಂಡಲದಿಂದ ಪ್ರಭುವನು II


ಜಲನಿಧಿಗಳಾಗಲಿ, ನೀರಿನ ಬುಗ್ಗೆಗಳಾಗಲಿ ಇಲ್ಲದಿರುವಾಗಲೆ ನಾ ಬಂದೆ ಜನ್ಮತಾಳಿ.


ಹಕ್ಕಿಗಳು ಹಾರಾಡುತ್ತಾ ತನ್ನ ಮರಿಗಳನ್ನು ಕಾಪಾಡುವಂತೆ, ಸೇನಾಧೀಶ್ವರ ಸರ್ವೇಶ್ವರನಾದ ನಾನು ಜೆರುಸಲೇಮನ್ನು ಕಾಪಾಡುವೆನು. ಅದನ್ನು ಸಂರಕ್ಷಿಸಿ ಕಾಯುವೆನು, ಅಪಾಯದಿಂದ ತಪ್ಪಿಸುವೆನು.”


ಸಾಗರಕ್ಕೆ ನೆರೆಬಂತೋ ಎಂಬ ಹಾಗೆ ಶುಭ್ರಗೊಳಿಸುತ್ತದೆ ತಾನು ಬಂದ ಹಾದಿಯನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು