Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:20 - ಕನ್ನಡ ಸತ್ಯವೇದವು C.L. Bible (BSI)

20 ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ತರುವಾಯ ದೇವರು - ಗುಂಪುಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ; ಪಕ್ಷಿಗಳು ಭೂವಿುಯ ಮೇಲೆ ಅಂತರಿಕ್ಷದೊಳಗೆ ಹಾರಾಡಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಳಿಕ ದೇವರು, “ನೀರಿನಲ್ಲಿ ಅನೇಕ ಜಲಚರಗಳು ತುಂಬಿಕೊಳ್ಳಲಿ. ಭೂಮಿಯ ಮೇಲೆ ಆಕಾಶದಲ್ಲಿ ಪಕ್ಷಿಗಳು ಹಾರಾಡಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆಮೇಲೆ ದೇವರು, “ನೀರಿನಲ್ಲಿ ಜೀವಜಂತುಗಳು ತುಂಬಿಕೊಳ್ಳಲಿ, ಭೂಮಿಯ ಮೇಲೆ ಆಕಾಶಮಂಡಲದಲ್ಲಿ ಪಕ್ಷಿಗಳು ಹಾರಾಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:20
17 ತಿಳಿವುಗಳ ಹೋಲಿಕೆ  

ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು.


ಅವನು, ಲೆಬನೋನಿನ ದೇವದಾರುವೃಕ್ಷ ಮೊದಲ್ಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನು ಕುರಿತು, ಎಲ್ಲಾ ಪಶುಪಕ್ಷಿ, ಜಲಜಂತು, ಕ್ರಿಮಿಕೀಟಗಳನ್ನು ಕುರಿತು ಪ್ರಸ್ತಾಪಿಸಬಲ್ಲವನಾಗಿದ್ದನು.


ಕಾಡುಮೃಗಗಳು, ಸಾಕುಪ್ರಾಣಿಗಳು I ಕ್ರಿಮಿಕೀಟಗಳು, ಪ್ರಾಣಿಪಕ್ಷಿಗಳು II


ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು.


ನಿನ್ನ ಬಳಿಯಿರುವ ಪ್ರಾಣಿಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲ ಜೀವಿಗಳೂ ಹೊರಗೆ ಬರಲಿ; ಅವುಗಳ ಸಂಖ್ಯೆ ಭೂಮಿಯಲ್ಲಿ ಬೆಳೆಯಲಿ; ಅವು ಹೆಚ್ಚಿ ವೃದ್ಧಿಯಾಗಲಿ,” ಎಂದರು.


ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು.


ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು


ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು.


ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.


ಒಬ್ಬನು ಜ್ಞಾನದಿಂದಲೂ ತಿಳುವಳಿಕೆ ಇಂದಲೂ ಕೆಲಸಮಾಡಿ ಕಾರ್ಯವನ್ನು ಸಿದ್ಧಿಗೆ ತಂದಮೇಲೆ, ಅದಕ್ಕಾಗಿ ಪ್ರಯಾಸಪಡದವನಿಗೆ ಅದನ್ನು ವಾರಸುದಾರನಾಗಿ ಬಿಡಬೇಕಾಗುತ್ತದೆ. ಇದು ಸಹ ವ್ಯರ್ಥವಲ್ಲವೆ? ಇದು ಅನ್ಯಾಯವಲ್ಲವೇ?


ಹೀಗೆ ಬೈಗೂ ಬೆಳಗೂ ಆಗಿ ನಾಲ್ಕನೆಯ ದಿನ ಆಯಿತು.


ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು.


ಈ ಕಾರಣ ಭೂಮಿಯ ಮೇಲೆ ಸಂಚರಿಸುತ್ತಿದ್ದ ಎಲ್ಲ ಪ್ರಾಣಿಗಳು, ಕಾಡುಮೃಗಗಳು, ಸಾಕುಪ್ರಾಣಿಗಳು, ಕ್ರಿಮಿಕೀಟಗಳು, ಮನುಷ್ಯರು ಸಹಿತವಾಗಿ ನಾಶವಾದುವು.


ಹೊಟ್ಟೆಯಿಂದ ನಡೆಯುವಂಥದನ್ನೂ ಕಾಲಿನಿಂದ ಹರಿದಾಡುವಂಥದನ್ನೂ ಬಹಳ ಕಾಲುಳ್ಳದ್ದನ್ನೂ ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನೂ ನೀವು ತಿನ್ನಬಾರದು; ಅವು ಹೇಯವಾಗಿವೆ.


ನೀವು ಅಂತ ಯಾವ ಸಣ್ಣ ಜೀವಿಯನ್ನೂ ತಿಂದು ನಿಮ್ಮನ್ನು ನೀವೇ ಹೇಸಿಕೆಮಾಡಿಕೊಂಡು ಅಶುದ್ಧರಾಗಬಾರದು.


ಇವುಗಳೆಲ್ಲವನ್ನು ಮಾಡಿದ್ದು ಸರ್ವೇಶ್ವರನ ಕೈಯೇ ಇದು ತಿಳಿಯದಿರುವುದು ಯಾರಿಗೆ ತಾನೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು