Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:25 - ಕನ್ನಡ ಸತ್ಯವೇದವು C.L. Bible (BSI)

25 ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದೇವರು ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿವಿುಕೀಟಗಳನ್ನೂ ಅವುಗಳ ಜಾತಿಗನುಸಾರ ಉಂಟುಮಾಡಿದನು. ಆತನು ಅದನ್ನು ಒಳ್ಳೇದೆಂದು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹೀಗೆ ದೇವರು ಪ್ರತಿಯೊಂದು ಬಗೆಯ ಕಾಡುಪ್ರಾಣಿಗಳನ್ನು, ಸಾಕುಪ್ರಾಣಿಗಳನ್ನು ಮತ್ತು ಹರಿದಾಡುವ ಎಲ್ಲಾ ಕ್ರಿಮಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೀಗೆ ದೇವರು ಎಲ್ಲ ತರದ ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:25
9 ತಿಳಿವುಗಳ ಹೋಲಿಕೆ  

ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.


ಆತನ ಶ್ವಾಸ ಶುಭ್ರವಾಗಿಸುತ್ತದೆ ಆಕಾಶಮಂಡಲವನು ಆತನ ಹಸ್ತ ಇರಿಯುತ್ತದೆ ಹರಿದೋಡುವ ಸರ್ಪವನು.


ಏಕೆಂದರೆ, ದೇವರ ವಾಕ್ಯದಿಂದಲೂ ನಮ್ಮ ಪ್ರಾರ್ಥನೆಯಿಂದಲೂ ಅದು ಪಾವನಗೊಳ್ಳುತ್ತದೆ.


ಈ ಕಾರಣ ಭೂಮಿಯ ಮೇಲೆ ಸಂಚರಿಸುತ್ತಿದ್ದ ಎಲ್ಲ ಪ್ರಾಣಿಗಳು, ಕಾಡುಮೃಗಗಳು, ಸಾಕುಪ್ರಾಣಿಗಳು, ಕ್ರಿಮಿಕೀಟಗಳು, ಮನುಷ್ಯರು ಸಹಿತವಾಗಿ ನಾಶವಾದುವು.


ಉಸಿರಾಡುವ ಭೂಮಿಯ ಜಂತುಗಳೆಲ್ಲ ಸತ್ತುಹೋದವು.


ಮೃಗಗಳನ್ನು ಬೇಕಾದರೆ ಕೇಳು, ಅವು ಕಲಿಸುವುವು ಆಕಾಶದ ಪಕ್ಷಿಗಳನ್ನು ಕೇಳು, ಅವು ತಿಳಿಸುವುವು.


ಅದರ ಅಂಗಗಳನು, ಶಕ್ತಿಯನು, ಸೊಬಗನು ನಾನು ವರ್ಣಿಸದೆ ಮುಚ್ಚಿಡಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು