ಆದಿಕಾಂಡ 1:26 - ಕನ್ನಡ ಸತ್ಯವೇದವು C.L. Bible (BSI)26 ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಮೇಲೆ ದೇವರು - ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟುಮಾಡೋಣ; ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿವಿುಕೀಟಗಳ ಮೇಲೆಯೂ ಎಲ್ಲಾ ಭೂವಿುಯ ಮೇಲೆಯೂ ದೊರೆತನಮಾಡಲಿ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಅವರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು. ಅಧ್ಯಾಯವನ್ನು ನೋಡಿ |