Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:28 - ಕನ್ನಡ ಸತ್ಯವೇದವು C.L. Bible (BSI)

28 ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ - ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂವಿುಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂವಿುಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನಮಾಡಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:28
28 ತಿಳಿವುಗಳ ಹೋಲಿಕೆ  

ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಹೀಗೆಂದರು - “ನೀವು ಅಭಿವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯಿರಿ’; ಭೂಲೋಕದಲ್ಲೆಲ್ಲ ಹರಡಿಕೊಳ್ಳಿ.


ನೀವು ಹೆಚ್ಚಿ ಅಭಿವೃದ್ಧಿಯಾಗಿರಿ, ನಿಮ್ಮ ಸಂಖ್ಯೆ ಬೆಳೆಯಲಿ ಭೂಮಿಯಲ್ಲಿ."


ನಾನು ನಿಮ್ಮ ಮೇಲೆ ಕರುಣೆಯಿಟ್ಟು, ಹೆಚ್ಚು ಸಂತಾನ, ಪ್ರಾಪ್ತಿಯನ್ನು ಕೊಟ್ಟು ಅಭಿವೃದ್ಧಿಗೊಳಿಸಿ, ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.


ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು.


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ.


ನಿನ್ನ ಬಳಿಯಿರುವ ಪ್ರಾಣಿಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲ ಜೀವಿಗಳೂ ಹೊರಗೆ ಬರಲಿ; ಅವುಗಳ ಸಂಖ್ಯೆ ಭೂಮಿಯಲ್ಲಿ ಬೆಳೆಯಲಿ; ಅವು ಹೆಚ್ಚಿ ವೃದ್ಧಿಯಾಗಲಿ,” ಎಂದರು.


ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II


ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.


ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.


ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”


ಹೀಗಾಯಿತು ನಿನ್ನ ತ0ದೆಯ‍‍ ದೇವರಿ0ದ ಸಿಗಲಿ ನಿನಗಾತನ ಸಹಾಯ ಹೀಗಾಯಿತು ಸರ್ವವಲ್ಲಭ ದೇವರಿ0ದ. ದೊರಕಲಿ ನಿನಗಾತನ ಆಶೀರ್ವಾದ. ಮೇಲಣ ಆಕಾಶದಿ0ದ, ಕೆಳಗಣ ಸಾಗರ ಸೆಲೆಗಳಿ0ದ ಸ್ತನ್ಯದಿ0ದ, ಗರ್ಭದಿ0ದ, ಆತ ನೀಡುವ ವರದಾನ.


ಅಮ್ಮೀಯೇಲನು ಆರನೆಯವನು; ಇಸ್ಸಾಕಾರನು ಏಳನೆಯವನು; ಪೆಯುಲ್ಲಿತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನು.


ಅವರಿಬ್ಬರ ಕಣ್ಣಲ್ಲೂ ನೀರು ಹರಿಯಿತು. ಬಳಿಕ ಏಸಾವನು ಕಣ್ಣೆತ್ತಿ ಆ ಮಹಿಳೆಯರನ್ನೂ ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ವಿಚಾರಿಸಿದನು. ಯಕೋಬನು, “ದೇವರು ನಿಮ್ಮ ದಾಸನಾದ ನನಗೆ ಅನುಗ್ರಹಿಸಿದ ಮಕ್ಕಳು ಇವರೇ” ಎಂದು ಹೇಳಿದನು.


“ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!”


ಭೂಮ್ಯಾಕಾಶಗಳು ಆತನನು ಕೊಂಡಾಡಲಿ I ಸಾಗರಗಳು, ಜಲಚರಗಳು ಆತನನು ಭಜಿಸಲಿ II


ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.


ಮದುವೆಯಾಗಬಾರದು, ಇಂತಿಂಥ ಆಹಾರವನ್ನು ಸೇವಿಸಬಾರದು ಎಂದು ಬೋಧಿಸುತ್ತಾರೆ. ಆದರೆ ಸತ್ಯವನ್ನು ಅರಿತು ಯಾರು ವಿಶ್ವಾಸಿಗಳಾಗಿದ್ದಾರೋ ಅಂಥವರು ಎಲ್ಲ ಆಹಾರಪದಾರ್ಥಗಳನ್ನು ಕೃತಜ್ಞತಾಸ್ತುತಿಯೊಡನೆ ಸೇವಿಸಲೆಂದೇ ದೇವರು ಅವುಗಳನ್ನು ಸೃಷ್ಟಿಸಿದ್ದಾರೆ.


ಅವರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಮಾಡಿದರು. ಅಂದೇ ಅವರನ್ನು ಆಶೀರ್ವದಿಸಿ ಅವರಿಗೆ ‘ಮನುಷ್ಯ’ರೆಂದು ಹೆಸರಿಟ್ಟರು.


ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II


ಮಾನವಕುಲವು ಜಗದ ಮೇಲೆ ಹಬ್ಬಿಹರಡಿದಂತೆ ಅವರಿಗೆ ಹೆಣ್ಣುಮಕ್ಕಳು ಹುಟ್ಟಿದರು.


ಬಲವಿದೆಯೆಂದು ಅದರಲಿ ನಂಬಿಕೆಯಿಡುವೆಯಾ? ಬಲಿಷ್ಠಕಾರ್ಯಗಳನು ಅದಕ್ಕೆ ಒಪ್ಪಿಸಿಬಿಡುವೆಯಾ?


ಕುರಿಗಳನು, ಕರುಗಳನು, ಕಾಡುಮೃಗಗಳನು I ಗರಿಗಳನು, ಮೀನುಗಳನು, ಜಲಚರಗಳನು I ಕರಗತ ಮಾಡಿದೆ ನೀ ಅವನಿಗೆಲ್ಲವನು II


ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು