Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ದೇವರು, “ಬೆಳಕಾಗಲಿ” ಎನ್ನಲು ಬೆಳಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ದೇವರು - ಬೆಳಕಾಗಲಿ ಅನ್ನಲು ಬೆಳಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ದೇವರು, “ಬೆಳಕಾಗಲಿ” ಅನ್ನಲು ಬೆಳಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ದೇವರು, “ಬೆಳಕಾಗಲಿ” ಎನ್ನಲು, ಬೆಳಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:3
22 ತಿಳಿವುಗಳ ಹೋಲಿಕೆ  

“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.


ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು.


ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ಹೊಗಳಲಿ ಪ್ರಭುವಿನ ನಾಮವನು ಇವೆಲ್ಲ I ಆತನ ಅಪ್ಪಣೆಗೆ ಉಂಟಾದವುಗಳೆಲ್ಲ II


ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II


ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II


ಆದರೂ ನಾನೀಗ ನಿಮಗೆ ಬರೆಯುತ್ತಿರುವುದು ಒಂದು ವಿಧದಲ್ಲಿ ಹೊಸ ಆಜ್ಞೆಯೇ ಸರಿ. ಅದರ ನೈಜಗುಣವು ಕ್ರಿಸ್ತಯೇಸುವಿನಲ್ಲಿ ಬೆಳಗಿದಂತೆ, ನಿಮ್ಮ ಜೀವನದಲ್ಲೂ ಬೆಳಗುತ್ತದೆ. ಏಕೆಂದರೆ, ಕತ್ತಲು ಕಳೆದುಹೋಗುತ್ತಿದೆ; ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.


ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.


ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I ಹರಡಿಸಿರುವೆ ಆಗಸವನು ಗುಡಾರದಂತೆ II


ಬೆಳಕಿನ ನಿವಾಸಕ್ಕೆ ಹೋಗುವ ಮಾರ್ಗವೆಲ್ಲಿ? ಕತ್ತಲು ವಾಸಮಾಡುವ ಸ್ಥಳವೆಲ್ಲಿ?


ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II


ಇಗೋ, ಪಸರಿಸುತ್ತಾನೆ ಸುತ್ತಲು ತನ್ನ ಬೆಳಕನ್ನು ಮುಚ್ಚಿಡುತ್ತಾನೆ ಕಡಲಿನ ಅಡಿಭಾಗವನು.


ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು.


ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು.


ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು