ಆದಿಕಾಂಡ 1:30 - ಕನ್ನಡ ಸತ್ಯವೇದವು C.L. Bible (BSI)30 ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇದಲ್ಲದೆ ಭೂವಿುಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿವಿುಕೀಟಗಳು ಎಂಬ ಜೀವಿಗಳಿಗೆ ಎಲ್ಲಾ ಹುಲ್ಲುಸೊಪ್ಪುಗಳನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಎಂದು ಹೇಳಿದನು; ಅದು ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಭೂಮಿಯ ಮೇಲಿರುವ ಪ್ರಾಣಿಗಳಿಗೆಲ್ಲಾ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆಲ್ಲಾ ಭೂಮಿಯ ಮೇಲೆ ಹರಿದಾಡುವ ಕ್ರಿಮಿಕೀಟಗಳಿಗೆಲ್ಲಾ ಆಹಾರಕ್ಕಾಗಿ ಸಸ್ಯರಾಶಿಯನ್ನು ಕೊಟ್ಟಿದ್ದೇನೆ” ಅಂದನು. ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಭೂಮಿಯಲ್ಲಿರುವ ಎಲ್ಲಾ ಜೀವಿಗಳಿಗೂ ಆಕಾಶದ ಪಕ್ಷಿಗಳಿಗೂ ನೆಲದ ಮೇಲೆ ಹರಿದಾಡುವ ಜೀವಿಗಳಿಗೂ ಉಸಿರನ್ನು ಹೊಂದಿರುವ ಪ್ರತಿಯೊಂದು ಜೀವಿಗಳಿಗೆ ಹಸಿರಾದ ಸಸ್ಯಗಳನ್ನೆಲ್ಲಾ ನಾನು ಆಹಾರವಾಗಿ ಕೊಟ್ಟಿದ್ದೇನೆ,” ಎಂದರು. ಅದು ಹಾಗೆಯೇ ಆಯಿತು. ಅಧ್ಯಾಯವನ್ನು ನೋಡಿ |