Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:31 - ಕನ್ನಡ ಸತ್ಯವೇದವು C.L. Bible (BSI)

31 ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅದು ಬಹು ಒಳ್ಳೇದಾಗಿತ್ತು. ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರು ತಾನು ಸೃಷ್ಟಿಸಿದ್ದನ್ನೆಲ್ಲಾ ನೋಡಿದಾಗ, ಅವು ಆತನಿಗೆ ಒಳ್ಳೆಯದಾಗಿ ಕಂಡವು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಆರನೆ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದೇವರು ತಾವು ಉಂಟು ಮಾಡಿದ್ದನ್ನೆಲ್ಲಾ ನೋಡಲು, ಅವೆಲ್ಲವೂ ಬಹಳ ಒಳ್ಳೆಯದಾಗಿದ್ದವು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:31
21 ತಿಳಿವುಗಳ ಹೋಲಿಕೆ  

ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದೇ. ಅವರಿಗೆ ಸ್ತುತಿಸಲ್ಲಿಸಿ ಸ್ವೀಕರಿಸಿದ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.


ಸ್ವಾಮಿದೇವನ ಮಹಿಮೆಯಿರಲಿ ಶಾಶ್ವತವಾಗಿ I ಆತ ಸಂತೋಷಿಸಲಿ ತನ್ನ ಸುಕೃತ್ಯಗಳಿಗಾಗಿ II


ಒಳಿತು-ಕೇಡು ಸಂಭವಿಸುವುದು ಪರಾತ್ಪರನ ಮಾತಿನಿಂದ ಅಲ್ಲವೆ?


ಭೂಮಿಗೆ ಮೂಲೆಗಲ್ಲನು ಹಾಕಿದವನಾರು? ಅದರ ಅಡಿಗಲ್ಲು ಯಾವುದರ ಮೇಲೆ ನಿಂತಿದೆ?”


ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.


ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು.


ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು.


ಹೀಗೆ ಬೈಗೂ ಬೆಳಗೂ ಆಗಿ ಮೊದಲನೆಯ ದಿನವಾಯಿತು.


ಹೀಗೆ ಬೈಗೂ ಬೆಳಗೂ ಆಗಿ ನಾಲ್ಕನೆಯ ದಿನ ಆಯಿತು.


ಹೀಗೆ ಬೈಗೂ ಬೆಳಗೂ ಆಗಿ ಮೂರನೆಯ ದಿನವಾಯಿತು.


ಏಕೆಂದರೆ, ದೇವರ ವಾಕ್ಯದಿಂದಲೂ ನಮ್ಮ ಪ್ರಾರ್ಥನೆಯಿಂದಲೂ ಅದು ಪಾವನಗೊಳ್ಳುತ್ತದೆ.


ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?”


ನೀ ನೀಡಲು ಕೂಡಿಸಿಟ್ಟುಕೊಳ್ಳುವುವು I ನೀ ಕೈತೆರೆಯಲು ಸಂತೃಪ್ತಿಪಡುವುವು II


ಒಳ್ಳೆಯವ, ಒಳ್ಳೆಯದ ಗೈಕೊಳ್ಳುವ ನೀನು I ಬೋಧಿಸೆನಗೆ ನಿನ್ನಾ ನಿಬಂಧನೆಗಳನು II


ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.


ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.


ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು