Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:5 - ಕನ್ನಡ ಸತ್ಯವೇದವು C.L. Bible (BSI)

5 ಹೀಗೆ ಬೈಗೂ ಬೆಳಗೂ ಆಗಿ ಮೊದಲನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಮೊದಲನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ಬೆಳಕಿಗೆ ಹಗಲೆಂದೂ ಕತ್ತಲೆಗೆ ರಾತ್ರಿಯೆಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೊದಲನೆ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ಬೆಳಕಿಗೆ ಹಗಲು ಎಂದೂ ಕತ್ತಲೆಗೆ ರಾತ್ರಿ ಎಂದೂ ಕರೆದರು. ಆಗ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:5
16 ತಿಳಿವುಗಳ ಹೋಲಿಕೆ  

ಹಗಲಿರುಳುಗಳಿಗೆ ನಿಯಾಮಕ ನೀನು I ರವಿತಾರೆಗಳ ನಿರ್ಮಾಪಕ ನೀನು II


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ನೀವೆಲ್ಲರೂ ಬೆಳಕಿನ ಹಾಗೂ ಹಗಲಿನ ಮಕ್ಕಳು. ನಾವು ಕತ್ತಲೆಗಾಗಲಿ, ರಾತ್ರಿಗಾಗಲಿ ಸೇರಿದವರಲ್ಲ.


ರಾತ್ರಿಯಾಗುತ್ತದೆ ನೀ ಕತ್ತಲನು ಬರಮಾಡಲು I ತಿರುಗಾಡುತ್ತವೆ ಆಗ ಕಾಡಿನ ಜೀವಜಂತುಗಳು II


ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”


ದಿನವು ಮರುದಿನಕೆ ಮಾಡುತಿದೆ ಈ ಪ್ರಕಟಣೆಯನು I ರಾತ್ರಿ ಮರುರಾತ್ರಿಗೆ ನೀಡುತಿದೆ ಈ ಪ್ರಚಾರವನು II


“ಸರ್ವೇಶ್ವರನಾದ ನನ್ನ ನುಡಿ ಇದು: ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೆ?


ಬೆಳಕು ಬೆಳಗಿಸುವ ವಸ್ತುಗಳೆಲ್ಲವೂ ಕಂಗೊಳಿಸುವುವು. ಹೀಗೆ ಕಂಗೊಳಿಸುವುದೆಲ್ಲವೂ ಬೆಳಕಾಗುವುದು.


ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.


ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು.


ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.


ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು.


ಹೀಗೆ ಬೈಗೂ ಬೆಳಗೂ ಆಗಿ ನಾಲ್ಕನೆಯ ದಿನ ಆಯಿತು.


ಹೀಗೆ ಬೈಗೂ ಬೆಳಗೂ ಆಗಿ ಮೂರನೆಯ ದಿನವಾಯಿತು.


ಆರೋನನು ಸತ್ತುಹೋದುದನ್ನು ಇಸ್ರಯೇಲ್ ಸಮಾಜದವರೆಲ್ಲರೂ ತಿಳಿದು ಅವನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದರು.


ಅಚ್ಚರಿಗೊಳ್ಳುವುವು ನಿನ್ನ ಮಹತ್ಕಾರ್ಯಗಳ ಕಂಡು ಎಲ್ಲೆ ಎಲ್ಲೆಗಳು I ಹರ್ಷಾನಂದಗೊಳ್ಳುವರು ಅದಕಂಡಾ ಪೂರ್ವಪಶ್ಚಿಮ ಪ್ರವಾಸಿಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು