Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 1:7 - ಕನ್ನಡ ಸತ್ಯವೇದವು C.L. Bible (BSI)

7 ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರು ವಿಸ್ತಾರವಾದ ಗುಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು; ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೀಗೆ ದೇವರು ಗುಮಟವನ್ನು ಉಂಟುಮಾಡಿ ಅದರ ಕೆಳಭಾಗದ ನೀರುಗಳನ್ನು ಅದರ ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹೀಗೆ ದೇವರು ವಿಸ್ತಾರವಾದ ಗುಮ್ಮಟವನ್ನು ಅದರ ಕೆಳಗಿದ್ದ ನೀರನ್ನೂ ಅದರ ಮೇಲಿದ್ದ ನೀರನ್ನೂ ಪ್ರತ್ಯೇಕಿಸಿದರು. ಅದು ಹಾಗೆಯೇ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 1:7
15 ತಿಳಿವುಗಳ ಹೋಲಿಕೆ  

ಉನ್ನತೋನ್ನತ ಆಕಾಶವೇ, ಹೊಗಳು ಆತನನು I ಅದರ ಮೇಲಿನ ಜಲರಾಶಿಗಳೇ, ಹೊಗಳಿ ಆತನನು II


ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.


ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ; ಒಣನೆಲವು ಕಾಣಿಸಿಕೊಳ್ಳಲಿ,” ಎಂದರು. ಹಾಗೆಯೇ ಆಯಿತು.


ಮೇಘಗಳನ್ನು ನೀರಿನಿಂದ ತುಂಬಿಸಿಹನು ಮೋಡ ಅದರ ಭಾರದಿಂದ ಒಡೆದುಹೋಗದು.


ಭೂಮಿಗೆ ಬೆಳಕನ್ನೀಯಲು, ಆಕಾಶ ದೀಪಗಳು ಉಂಟಾಗಲಿ,” ಎಂದರು. ಹಾಗೆಯೇ ಆಯಿತು.


ಮಳೆ ತುಂಬಿದ ಮೋಡಗಳು ನೆಲದ ಮೇಲೆ ಸುರಿದುಬಿಡುತ್ತವೆ. ಮರವು ದಕ್ಷಿಣದ ಕಡೆಗಾಗಲಿ, ಉತ್ತರದ ಕಡೆಗಾಗಲಿ ಉರುಳಿದರೆ ಬಿದ್ದ ಕಡೆಯಲ್ಲೆ ಬಿದ್ದಿರುತ್ತದೆ.


ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು.


ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು.


ಬುಗ್ಗೆಗಳು ಚಿಮ್ಮಿ ಓಡಮಾಡುವೆ ತಗ್ಗುಗಳಲಿ I ನದಿಗಳ ಹರಿಯಮಾಡುವೆ ಗುಡ್ಡಗಳ ನಡುವೆಯಲಿ II


ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು.


ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು I ತಾರಾಮಂಡಲ ತೋರುತಿದೆ ದೇವರ ಕೈಕೃತಿಗಳನು II


ದಿನವು ಮರುದಿನಕೆ ಮಾಡುತಿದೆ ಈ ಪ್ರಕಟಣೆಯನು I ರಾತ್ರಿ ಮರುರಾತ್ರಿಗೆ ನೀಡುತಿದೆ ಈ ಪ್ರಚಾರವನು II


ಜ್ಞಾನದಿಂದ ಜಗವನು ನಿರ್ಮಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು