Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:14 - ಕನ್ನಡ ಸತ್ಯವೇದವು C.L. Bible (BSI)

14 ಕಸ್ಲುಹ್ಯರೂ ಕೆಪ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರಿಂದ ಬಂದವರು ಫಿಲಿಷ್ಟಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಫಿಲಿಷ್ಟಿಯರಿಂದ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕಸ್ಲುಹ್ಯರ ಬಳಿಯಿಂದ ಫಿಲಿಷ್ಟಿಯರು ಹೊರಟುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:14
6 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಸೂರೆಯಾಗುವರು ಫಿಲಿಷ್ಟಿಯರೆಲ್ಲರು ನಿರ್ಮೂಲವಾಗುವರು ಟೈರ್-ಸಿಡೋನಿನ ಸಹಾಯಕರಲ್ಲಿ ಅಳಿದುಳಿದವರು. ಸರ್ವೇಶ್ವರನೆ ನಾಶಮಾಡುವನು ಕ್ರೇಟ್ ದ್ವೀಪದಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು.


“ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?


ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಜನಿಸಿದರು. (ಫಿಲಿಷ್ಟಿಯರು ಕಸ್ಲುಹ್ಯರಿಂದ ಬಂದವರು.)


ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಸರ್ವೇಶ್ವರ ರೆಫಾಯರನ್ನು ಅಮ್ಮೋನಿಯರ ಬಳಿಯಿಂದ ಹೊರದೂಡಿದರು; ಅಮ್ಮೋನಿಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)


ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು