Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:2 - ಕನ್ನಡ ಸತ್ಯವೇದವು C.L. Bible (BSI)

2 ಯೆಫೆತನ ಮಕ್ಕಳು ಇವರು - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಫೆತನ ಸಂತಾನದವರು ಯಾರಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಫೆತನ ಗಂಡುಮಕ್ಕಳು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್ ತೂಬಲ್, ಮೆಷೆಕ್ ಮತ್ತು ತೀರಾಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:2
16 ತಿಳಿವುಗಳ ಹೋಲಿಕೆ  

“ನರಪುತ್ರನೇ, ರೋಷಿನವರನ್ನು, ಮೆಷೆಕಿನವರನ್ನು ಹಾಗು ತೂಬಲಿನವರನ್ನು ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ:


ಪಡೆಪಡೆಯಾದ ಗೋಮೆರ್ಯರನ್ನು, ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಪಡೆಪಡೆಯಾದ ತೋಗರ್ಮದವರನ್ನು, ಹೀಗೆ ಅನೇಕಾನೇಕ ಜನಾಂಗಗಳನ್ನು ನಿನ್ನೊಂದಿಗೆ ಬರಮಾಡುವೆನು.


ಅವನು ಬಂದು ಭೂಮಿಯ ಅಷ್ಟದಿಕ್ಕುಗಳಲ್ಲಿರುವ ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸುವನು. ಯುದ್ಧಮಾಡುವುದಕ್ಕಾಗಿ ಅವರನ್ನು ಒಟ್ಟುಗೂಡಿಸುವನು. ಅವರ ಸಂಖ್ಯೆ ಸಮುದ್ರತೀರದ ಮರಳಿನಷ್ಟಿರುವುದು.


ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.


“ನರಪುತ್ರನೇ, ನೀನು ಗೋಗನಿಗೆ ವಿರುದ್ಧ ಈ ದೈವೋಕ್ತಿಯನ್ನು ನುಡಿ: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಒಡೆಯನಾದ ಗೋಗನೇ,


ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪುಕೂಡಿದ ಬಹುಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವೆ.


“ವೆದಾನಿನವರೂ, ಯಾವಾನಿನವರೂ ಉಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸುತ್ತಿದ್ದರು. ಉಕ್ಕು, ಬಜೆ, ಲವಂಗ, ಚಕ್ಕೆಗಳು ನಿನಗೆ ಆಮದಾಗುತ್ತಿದ್ದವು.


ನಿನ್ನ ಹಾಯಿ ನಿನಗೆ ಧ್ವಜವಾಗಲೆಂದೆ ಮಾಡಿಹರು ಈಜಿಪ್ಟಿನ ಕಸೂತಿಯ ನಾರುಮಡಿಯಿಂದ. ನಿನ್ನ ಮೇಲ್ಕಟ್ಟು ಚಿತ್ರಿತವಾಗಿದೆ ಎಲೀಷ ಕರಾವಳಿಯ ಊದಾ ಕಡುಗೆಂಪುಗಳಿಂದ.


ಹಿಬ್ರಿಯರೆಲ್ಲರಿಗೆ ಮೂಲಪುರುಷನೂ ಯೆಫೆತನ ಅಣ್ಣನೂ ಆಗಿದ್ದ ಶೇಮನಿಗು ಸಹ ಮಕ್ಕಳಾದರು.


"ಅಭಿವೃದ್ಧಿಯನು ನೀಡಲಿ ದೇವರು ಯೆಫೆತನಿಗೆ ವಾಸವಾಗಿರಲಿವನು ಶೇಮನ ಗುಡಾರದೊಳಗೆ, ದಾಸನಾಗಿರಲಿ ಕಾನಾನನು ಯೆಫೆತನಿಗೆ”


ನೋಹನ ಮಕ್ಕಳಾದ ಶೇಮ್, ಹಾಮ್ ಮತ್ತು ಯೆಫೆತರಿಗೆ ಜಲಪ್ರಳಯ ಮುಗಿದ ಮೇಲೆ ಮಕ್ಕಳಾದರು. ಅವರ ವಂಶಾವಳಿ ಇದು :


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II


“ಮೆಷೆಕ್, ತೂಬಲ್ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತಾರೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು, ಜೀವಲೋಕದಲ್ಲಿ ಅವರು ಭೀಕರರಾಗಿದ್ದರಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು