Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:4 - ಕನ್ನಡ ಸತ್ಯವೇದವು C.L. Bible (BSI)

4 ಯಾವಾನನ ಮಕ್ಕಳು - ಎಲಿಷಾ, ಸ್ಪೇಯಿನ್ (ತಾರ್ಷಿಸ್), ಸೈಪ್ರಸ್ (ಕಿತ್ತೀಮ್) ಮತ್ತು ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವು ಪ್ರದೇಶಗಳಲ್ಲಿ ಹರಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾವಾನನ ಸಂತಾನದವರು - ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾ ಎಂಬ ಸ್ಥಳಗಳವರು; ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾವಾನನ ಗಂಡುಮಕ್ಕಳು: ಎಲೀಷಾ, ತಾರ್ಷೀಸ್, ಕಿತ್ತೀಮ್ ಮತ್ತು ದೋದಾನೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:4
10 ತಿಳಿವುಗಳ ಹೋಲಿಕೆ  

ಅವನಿಗೆ ವಿರುದ್ಧವಾಗಿ ರೋಮಿನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗುವನು. ಪವಿತ್ರ ಒಡಂಬಡಿಕೆಯ ವಿರುದ್ಧ ಮತ್ಸರಗೊಂಡು ಸಾಧ್ಯವಾದಷ್ಟೂ ಹಾನಿಮಾಡುವನು. ಸ್ವದೇಶಕ್ಕೆ ಹಿಂದಿರುಗಿ ಪವಿತ್ರ ಒಡಂಬಡಿಕೆಯನ್ನು ತೊರೆದವರಿಗೆ ಆದರ ತೋರುವನು.


“ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ.


ಟೈರ್ ನಗರವನ್ನು ಕುರಿತ ದೈವೋಕ್ತಿ : “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”


‘ಸೈಪ್ರಸ್’ ಎಂಬ ಸ್ಥಳದಿಂದ ಹಡಗುಗಳಲ್ಲಿ ಬರುವರು ಜನರು ಸೋಲಿಸುವರವರು ಅಶ್ಯೂರ್ಯರನ್ನೂ ಏಬೆರ್ ಜರನ್ನೂ; ಅವರಿಗೂ ನಾಶವುಂಟಾಗುವುದು.”


ನಿನಗೆ ಬೇಕಾದ ದಿನಸುಗಳನು ತಂದವು ತಾರ್ಷೀಷಿನ ಹಡಗುಗಳು ಸಾಲುಸಾಲಾಗಿ ನೀನು ಭರ್ತಿಯಾಗಿ, ಸಮುದ್ರದ ಮಧ್ಯೆಯಿದ್ದೆ ಬಹು ಭಾರವಾಗಿ.


ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದುದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.


ದೇಶ - ಭಾಷಾ - ಕುಲ - ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.


ಎಲೀಷ, ಸ್ಪೇನ್, ಸೈಪ್ರಸ್, ದೋದಾನೀಮ್ ಎಂಬ ಸ್ಥಳಗಳವರು ಯಾವಾನನ ಮಕ್ಕಳು.


ನಿನ್ನ ಹುಟ್ಟುಗಳು ರೂಪಿಸಲಾಗಿವೆ ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಮೇಲ್ಮಾಳಿಗೆ ಕಟ್ಟಲಾಗಿದೆ ಕಿತ್ತೀಮ್ ದ್ವೀಪದ ತಿಲಕ ಹಲಗೆಯಿಂದ, ಕೆತ್ತಲಾಗಿದೆ ದಂತದಿಂದ.


ನಿನ್ನ ಹಾಯಿ ನಿನಗೆ ಧ್ವಜವಾಗಲೆಂದೆ ಮಾಡಿಹರು ಈಜಿಪ್ಟಿನ ಕಸೂತಿಯ ನಾರುಮಡಿಯಿಂದ. ನಿನ್ನ ಮೇಲ್ಕಟ್ಟು ಚಿತ್ರಿತವಾಗಿದೆ ಎಲೀಷ ಕರಾವಳಿಯ ಊದಾ ಕಡುಗೆಂಪುಗಳಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು