Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 10:9 - ಕನ್ನಡ ಸತ್ಯವೇದವು C.L. Bible (BSI)

9 ದೇವರ ದೃಷ್ಟಿಯಲ್ಲಿ ದಿಟ್ಟ ಬೇಟೆಗಾರ. "ಪ್ರಭು ನಿನ್ನನ್ನು ನಿಮ್ರೋದನಂಥ ದಿಟ್ಟಬೇಟೆಗಾರನಾಗಿಸಲಿ" ಎಂಬ ನಾಣ್ನುಡಿ ಇಂದಿಗೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೆಹೋವನ ದೃಷ್ಟಿಯಲ್ಲಿ ನಿಮ್ರೋದನು ದಿಟ್ಟ ಬೇಟೆಗಾರನಾಗಿದ್ದನು. ಆದುದರಿಂದ “ಯೆಹೋವನು ನಿನ್ನನ್ನು ದಿಟ್ಟ ಬೇಟೆಗಾರನಾಗಿಸಲಿ” ಎಂಬ ಗಾದೆ ಇಂದಿನವರೆಗೂ ಹೇಳುವುದುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಅತಿ ಸಾಹಸಿಯಾದ ಬೇಟೆಗಾರನು. ನಿಮ್ರೋದನಂತೆ ಅತಿ ಸಾಹಸಿಯಾದ ಬೇಟೆಗಾರನೆಂದು ಈಗಲೂ ಹೇಳುವದುಂಟಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನ ಮುಂದೆ ಅವನು ಚತುರ ಬೇಟೆಗಾರನಾಗಿದ್ದನು. ಆದ್ದರಿಂದ ಜನರು ಬೇರೆಯವರನ್ನು ಅವನಿಗೆ ಹೋಲಿಸಿ, “ಅವನು ನಿಮ್ರೋದನಂತೆ, ಯೆಹೋವನ ಮುಂದೆ ಚತುರ ಬೇಟೆಗಾರ” ಎಂದು ಹೇಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 10:9
13 ತಿಳಿವುಗಳ ಹೋಲಿಕೆ  

ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು.


ಯಕೋಬನು ತಂದೆ ಇಸಾಕನಿಂದ ಆಶೀರ್ವಾದ ಪಡೆದು ಹೊರಟುಹೋದನು. ಕೂಡಲೆ ಅವನ ಅಣ್ಣ ಏಸಾವನು ಬೇಟೆಯಿಂದ ಹಿಂದಿರುಗಿ ಬಂದನು.


ಆ ಹುಡುಗರಿಬ್ಬರು ಬೆಳೆದರು. ಏಸಾವನು ಚೂಟಿಯಾದ ಬೇಟೆಗಾರನಾದ, ವನವಾಸಿಯಾದ, ಯಕೋಬನು ಸಾಧುಮನುಷ್ಯ, ಅವನದು ಗುಡಾರಗಳಲ್ಲಿ ವಾಸ,


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಜಗತ್ತು ದೇವರ ದೃಷ್ಟಿಯಲ್ಲಿ ಕೆಟ್ಟುಹೋಗಿತ್ತು. ಹಿಂಸಾಚಾರದಿಂದ ತುಂಬಿತುಳುಕುತ್ತಿತ್ತು.


ದೇವಪುತ್ರರೂ ಮನುಷ್ಯಪುತ್ರಿಯರೂ ಕೂಡಿ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದನಂತರವೂ ಜಗದಲ್ಲಿ ‘ನೆಪೀಲಿಯರು’ ಇದ್ದರು. ಇವರೇ ಪ್ರಾಚೀನಕಾಲದ ಸುಪ್ರಸಿದ್ಧ ಪರಾಕ್ರಮಿಗಳು.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ, ಉದ್ದವಾದವರಿಗೂ ಗಿಡ್ಡವಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಮಹಿಳೆಯರಿಗೆ ಧಿಕ್ಕಾರ! ಮಹಿಳೆಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮಗೆ ಬೇಕಾದವರ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?


ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.


ಕೂಷನು ನಿಮ್ರೋದನನ್ನು ಪಡೆದನು. ಇವನೇ ಪರಾಕ್ರಮದಲ್ಲಿ ಮೊದಲನೆಯ ಭೂರಾಜ.


ಬಾಬಿಲೋನಿಯ (ಶಿನಾರ್) ನಾಡಿನಲ್ಲಿರುವ ಯೆರೆಕ್, ಅಕ್ಕದ್ ಬಾಬಿಲೋನ್ ಕಲ್ನೇ ಈ ಎಲ್ಲ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.


ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು