Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:27 - ಕನ್ನಡ ಸತ್ಯವೇದವು C.L. Bible (BSI)

27 ತೆರಹನ ವಂಶವೃಕ್ಷ: ತೆರಹನಿಗೆ ಅಬ್ರಾಮ, ನಾಹೋರ, ಹಾರಾನ ಇವರು ಹುಟ್ಟಿದರು. ಹಾರಾನನಿಗೆ ಲೋಟನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ತೆರಹನ ವಂಶದವರ ಚರಿತ್ರೆಯು: ತೆರಹನು ಅಬ್ರಾಮ, ನಾಹೋರ್, ಹಾರಾನ್ ಎಂಬುವರನ್ನು ಪಡೆದನು. ಹಾರಾನನು ಲೋಟನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ತೆರಹನ ವಂಶದವರ ಚರಿತ್ರೆ. ತೆರಹನು ಅಬ್ರಾಮ ನಾಹೋರ ಹಾರಾನರನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇದು ತೆರಹನ ಕುಟುಂಬ ಚರಿತ್ರೆ. ತೆರಹನು ಅಬ್ರಾಮ, ನಾಹೋರ ಮತ್ತು ಹಾರಾನ ಎಂಬವರ ತಂದೆ. ಹಾರಾನನು ಲೋಟನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ತೆರಹನ ವಂಶಾವಳಿ: ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:27
10 ತಿಳಿವುಗಳ ಹೋಲಿಕೆ  

ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗ ಲೋಟನನ್ನು ಅವನ ಆಸ್ತಿಪಾಸ್ತಿ ಸಹಿತ ಹಿಡಿದುಕೊಂಡು ಹೋದರು.


ಸರ್ವೇಶ್ವರ ಹೀಗೆಂದು ಹೇಳಿದ ಮೇಲೆ ಅಬ್ರಾಮನು ಹೊರಟನು. ಲೋಟನು ಅವನ ಸಂಗಡವೆ ಹೋದನು. ಆ ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು.


ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗು ತನಗೆ ಸೊಸಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಪಟ್ಟಣವನ್ನು ಬಿಟ್ಟು ಕಾನಾನ್ ನಾಡಿಗೆ ತೆರಳಿದನು. ಅವರು ಹಾರಾನ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ವಾಸಮಾಡಿಕೊಂಡರು.


ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು.


ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು.


ಕೆಲವು ಕಾಲವಾದ ಮೇಲೆ ಅಬ್ರಹಾಮನಿಗೆ ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಿಂದ ಮಕ್ಕಳಾದುವೆಂಬ ಸಮಾಚಾರ ಮುಟ್ಟಿತು.


ಅಬ್ರಾಮ್ (ಇವನು ಅಬ್ರಹಾಮ ಎಂದೂ ಹೆಸರು ಹೊಂದಿದವನು).


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು