Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:3 - ಕನ್ನಡ ಸತ್ಯವೇದವು C.L. Bible (BSI)

3 “ಬನ್ನಿ, ಒಳ್ಳೊಳ್ಳೆ ಸುಟ್ಟ ಇಟ್ಟಿಗೆಗಳನ್ನು ಮಾಡೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಬನ್ನಿ, ಒಳ್ಳೊಳ್ಳೇ ಸುಟ್ಟ ಇಟ್ಟಿಗೆಗಳನ್ನು ಮಾಡೋಣ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ಒಬ್ಬರಿಗೊಬ್ಬರು ಮಾತಾಡುತ್ತಾ, “ಬನ್ನಿ, ಒಳ್ಳೆಯ ಸುಟ್ಟ ಇಟ್ಟಿಗೆಗಳನ್ನು ಮಾಡೋಣ” ಎಂದು ನಿರ್ಧರಿಸಿದರು. ಅವರು ತಮ್ಮ ಮನೆಗಳನ್ನು ಕಟ್ಟಲು ಕಲ್ಲುಗಳ ಬದಲಾಗಿ ಇಟ್ಟಿಗೆಗಳನ್ನೂ ಗಾರೆಗೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಲ್ಲಿ ಅವರು, “ಬನ್ನಿರಿ ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:3
19 ತಿಳಿವುಗಳ ಹೋಲಿಕೆ  

ಆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಗುಣಿಗಳು ಬಹಳವಿದ್ದವು. ಸೊದೋಮ್ ಗೊಮೋರದ ರಾಜರಕಡೆಯವರು ಹಿಮ್ಮೆಟ್ಟಿ ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು. ಉಳಿದವರು ಬೆಟ್ಟಗಳಿಗೆ ಓಡಿಹೋದರು.


ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು.


ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು.


ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ.


ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಎಫ್ರಯಿಮ್ ಜನರಿಗೂ ಸಮಾರ್ಯದ ನಿವಾಸಿಗಳಿಗೂ ಅದು ಗೊತ್ತಾಗುವುದು.


ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರಿಗೂ ಇದೇ ಗತಿ ಆಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.


“ಇಂಥಿಂಥ ದಿನ ಇಂಥಿಂಥ ಪಟ್ಟಣಕ್ಕೆ ಹೋಗೋಣ, ಅಲ್ಲಿ ಒಂದು ವರ್ಷ ಇದ್ದು ವ್ಯಾಪಾರ ಮಾಡೋಣ; ಅತಿಯಾಗಿ ಲಾಭ ಸಂಪಾದಿಸೋಣ,” ಎಂದೆಲ್ಲಾ ಆಲೋಚಿಸುವವರೇ, ಈಗ ಕೇಳಿ: ನೀವು ಇಷ್ಟೆಲ್ಲಾ ಆಲೋಚಿಸಿದರೂ ನಾಳೆ ಏನಾಗುವುದೋ ನಿಮಗೇ ತಿಳಿಯದು.


ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿ ಶೇಖರಿಸಿಡು. ನಿನ್ನ ಕೋಟೆಯನ್ನು ಭದ್ರಪಡಿಸು. ಮಣ್ಣಿಗೆ ಇಳಿ; ಜೇಡಿಯನ್ನು ತುಳಿ; ಇಟ್ಟಿಗೆಯ ಅಚ್ಚನ್ನು ಹಿಡಿ.


ಈ ಜನರು ತೋಪುಗಳಲ್ಲಿ ಬಲಿಕೊಡುತ್ತಾರೆ. ಇಟ್ಟಿಗೆಯ ಪೀಠಗಳ ಮೇಲೆ ಧೂಪಾರತಿ ಎತ್ತುತ್ತಾರೆ.


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


“ಬಾ ಮನವೇ, ಸಂತೋಷದ ಮೂಲಕ ನಿನ್ನನ್ನು ಪರೀಕ್ಷಿಸುವೆ; ಸುಖಭೋಗವನ್ನು ಅನುಭವಿಸು” ಎಂದು ಮನಸ್ಸಿನಲ್ಲೇ ಹೇಳಿಕೊಂಡೆ. ಆದರೆ ಇದೂ ವ್ಯರ್ಥವೇ ಸರಿ.


ಅವರು ನಿನಗೆ “ನಮ್ಮೊಡನೆ ಬಾ, ಹೊಂಚುಹಾಕಿ ಹತ್ಯೆಮಾಡೋಣ;


ಕೆಟ್ಟದನು ಮಾಡಲು ಮನದಟ್ಟುಮಾಡಿಕೊಂಡಿಹರು I “ಗುಟ್ಟಾಗಿಡೋಣ ಉರುಲು, ಕಾಂಬರಾರು?” ಎನ್ನುತಿಹರು? II


ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.


ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು