ಆದಿಕಾಂಡ 11:4 - ಕನ್ನಡ ಸತ್ಯವೇದವು C.L. Bible (BSI)4 ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬಳಿಕ ಅವರು, “ನಾವು ನಮಗಾಗಿ ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವಂಥ ಗೋಪುರವನ್ನೂ ಕಟ್ಟಿದರೆ ನಾವು ಪ್ರಸಿದ್ಧರಾಗುತ್ತೇವೆ. ಆಗ ನಾವು ಭೂಮಿಯಲ್ಲೆಲ್ಲಾ ಚದರಿಹೋಗದೆ ಒಂದೇ ಸ್ಥಳದಲ್ಲಿ ವಾಸಿಸಲು ಸಾಧ್ಯವಾಗುತ್ತದೆ” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅನಂತರ ಅವರು, “ಬನ್ನಿರಿ, ನಾವು ಭೂಮಿಯ ಮೇಲೆ ಪಟ್ಟಣವನ್ನು ಕಟ್ಟೋಣ. ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನು ನಮಗೋಸ್ಕರವಾಗಿ ಕಟ್ಟಿಕೊಂಡು, ನಮಗೆ ಹೆಸರು ಸಂಪಾದಿಸಿಕೊಳ್ಳೋಣ. ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರುವುದಕ್ಕೆ ಆಸ್ಪದವಾಗುವದಿಲ್ಲ,” ಎಂದುಕೊಂಡರು. ಅಧ್ಯಾಯವನ್ನು ನೋಡಿ |