Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 11:6 - ಕನ್ನಡ ಸತ್ಯವೇದವು C.L. Bible (BSI)

6 ನೋಡಿದ ಮೇಲೆ, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಇದು ಇವರು ಕೈಗೊಂಡಿರುವ ಕಾರ್ಯದ ಪ್ರಾರಂಭ ಮಾತ್ರ. ಮುಂದಕ್ಕೆ ಇವರು ಏನು ಬೇಕಾದರೂ ಮಾಡಿಯಾರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೋಡಿದ ಮೇಲೆ ಯೆಹೋವನು, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇವರು ಇಷ್ಟು ದೊಡ್ಡ ಯೋಜನೆಯೊಂದಿಗೆ ಒಟ್ಟಾಗಿ ಕೆಲಸ ಮಾಡಲಾರಂಭಿಸಿದ್ದಾರೆ. ಇನ್ನು ಮುಂದೆ ಇವರು ಏನು ಮಾಡಲು ಉದ್ದೇಶಿಸಿದರೂ ಇವರಿಗೆ ಯಾವುದೂ ಅಸಾಧ್ಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೋಡಿದ ಮೇಲೆ ಆತನು - ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಪ್ರಾರಂಭದಲ್ಲೇ ಇಷ್ಟು ದೊಡ್ಡ ಕೆಲಸ ಮಾಡುವವರಾಗಿರಲು ಮುಂದೆ ಏನು ಆಲೋಚಿಸಿದರೂ ಇವರಿಗೆ ಅಸಾಧ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು, “ಈ ಜನರೆಲ್ಲರು ಒಂದೇ ಭಾಷೆಯನ್ನು ಮಾತಾಡುವುದರಿಂದ ಒಟ್ಟಾಗಿ ಸೇರಿಕೊಂಡಿದ್ದಾರೆ. ಪ್ರಾರಂಭದಲ್ಲೇ ಇಂಥ ಕಾರ್ಯವನ್ನು ಮಾಡುತ್ತಿರುವ ಇವರು ಮುಂದೆ ಏನು ಬೇಕಾದರೂ ಮಾಡಲು ಶಕ್ತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು, “ಇವರಿಗೆ ಒಂದೇ ಜನಾಂಗವೂ ಒಂದೇ ಭಾಷೆಯೂ ಇದೆ. ಇವರು ಇದನ್ನು ಮಾಡಲಾರಂಭಿಸಿದ್ದಾರೆ. ಈಗ ಇನ್ನು ಮುಂದೆ ಇವರು ಮಾಡುವುದಕ್ಕೆ ಉದ್ದೇಶಿಸುವುದು ಇವರಿಗೆ ಅಸಾಧ್ಯವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 11:6
12 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು.


ಭೂಜನರೆಲ್ಲರಿಗೂ ಇದ್ದುದು ಒಂದೇ ಭಾಷೆ, ಒಂದೇ ನುಡಿ.


ಗರ್ವ ಹೃದಯಿಗಳನಾತ ಚದರಿಸಿರುವನು I ಪ್ರದರ್ಶಿಸಿರುವನು ತನ್ನ ಬಾಹುಬಲವನು II


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.


ಜಗದಲ್ಲೆಲ್ಲ ಹರಡಿಕೊಂಡಿರುವ ಜನರು ನೋಹನ ಈ ಮೂರು ಮಕ್ಕಳಿಂದಲೇ ಉತ್ಪತ್ತಿಯಾದುದು.


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯಮಾಡಲಿ,” ಎಂದರು.


ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿದನು: “ಗಟ್ಟಿಯಾಗಿ ಕೂಗಿರಿ; ಅವನು ದೇವರಲ್ಲವೆ? ಈಗ ಒಂದು ವೇಳೆ ಅವನು ಧ್ಯಾನದಲ್ಲಿ ಇರಬಹುದು; ಇಲ್ಲವೇ, ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು; ಇಲ್ಲದಿದ್ದರೆ, ನಿದ್ರೆಮಾಡುತ್ತಿರಬೇಕು; ಎಚ್ಚರವಾಗಲಿ,” ಎಂದು ಹೇಳಿದನು.


“ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು